ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬಾವನ ಸೌಂದತ್ತಿ ಗ್ರಾಮದ ದಿಗ್ಗೇವಾಡಿ ರಸ್ತೆ ಬದಿ, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕಟ್ಟಡ ಕಾರ್ಮಿಕ ಶಿವಾನಂದ ಕುಂಬಾರ ಮೃತಪಟ್ಟ ಘಟನೆ ನಡೆದಿದೆ.
ಮದ್ಯದ ಅಮಲಿನಲ್ಲಿ ಬಿದ್ದಿದ್ದ ಕಾರ್ಮಿಕನ ಮೇಲೆ 4-5 ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿ ಗಂಭೀರ ಗಾಯ ಮಾಡಿದ್ದವು. ಬಳಿಕ ಚಿಕಿತ್ಸೆಗಾಗಿ ಕುಟುಂಬಸ್ಥರು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಕಾರ್ಮಿಕ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದು, ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.