ಕೇಂದ್ರ ₹22.50 ಬೆಲೆಗೆ ಅಕ್ಕಿ ಕೊಟ್ಟರೂ ಖರೀದಿಸದ ರಾಜ್ಯ ಸರ್ಕಾರ: ಸಚಿವ ಪ್ರಲ್ಹಾದ ಜೋಶಿ ಆರೋಪ

Date:

Advertisements

ಕೇಂದ್ರ ಸರ್ಕಾರ ಈಗ ರಾಜ್ಯಕ್ಕೆ ₹22.50 ಬೆಲೆಗೆ ಅಕ್ಕಿ ಕೊಟ್ಟು ವಾರ್ಷಿಕ ₹2,280 ಕೋಟಿ ಉಳಿಸಿಕೊಡಲು ಮುಂದಾದರೆ ರಾಜ್ಯ ಸರ್ಕಾರವೇ ಇದಕ್ಕೆ ಸಿದ್ಧವಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ.

“ರಾಜ್ಯದ ಜನತೆಗೆ 10 ಕೆಜಿ ಅಕ್ಕಿಯೂ ಇಲ್ಲ, 5 ಕೆಜಿಯ ದುಡ್ದೂ ಲಭಿಸುತ್ತಿಲ್ಲ” ಎಂಬ ಮಾದ್ಯಮಗಳ ವರದಿಗೆ ಕೇಂದ್ರ ಆಹಾರ ಸಚಿವರು, ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಹೀಗೆ ಪ್ರತಿಕ್ರಿಯಿಸಿದ್ದಾರೆ.

“ರಾಜ್ಯ ಸರ್ಕಾರ ₹34ರ ದರದಲ್ಲಿ ಅಕ್ಕಿ ಖರೀದಿಸಬೇಕಾಗುತ್ತದೆ. ಆದರೆ, ಕೇಂದ್ರ ಸರ್ಕಾರ ₹10 ಕಡಿಮೆ ಮಾಡಿ ಕೇವಲ ₹22.50 ಬೆಲೆಗೆ ಕೊಡುತ್ತೇವೆಂದರೂ ಖರೀದಿಸಲು ಮುಂದೆ ಬಂದಿಲ್ಲ. ಕೇಂದ್ರದಿಂದ ₹22.50 ಗೆ ಅಕ್ಕಿ ಖರೀದಿಸಿದಲ್ಲಿ ರಾಜ್ಯ ಸರ್ಕಾರಕ್ಕೆ ವಾರ್ಷಿಕ ₹2,280 ಕೋಟಿ ಉಳಿತಾಯವಾಗುತ್ತದೆ. ಆದರೆ, ಇದಕ್ಕೆ ಮುಂದಾಗದ ಸಿದ್ದರಾಮಯ್ಯ ಸರ್ಕಾರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ” ಎಂದು ಜೋಶಿ ದೂರಿದ್ದಾರೆ.

Advertisements

“ರಾಜ್ಯಕ್ಕೆ ಎಷ್ಟು ಬೇಕಾದರೂ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂಬುದನ್ನು ಹೇಳಿದ್ದೇವೆ. ಹಾಗಿದ್ದರೂ ಸಿದ್ದರಾಮಯ್ಯ ಸರ್ಕಾರ ಕೇಂದ್ರದಿಂದ ಅಕ್ಕಿ ಖರೀದಿಸಲು ಸಿದ್ಧವಿದ್ದಂತಿಲ್ಲ. ರಾಜ್ಯದ ಜನತೆಗೆ ಗ್ಯಾರಂಟಿಗಳ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ, ಯಾವುದನ್ನೂ ಸರಿ ನೀಡುತ್ತಿಲ್ಲ. ಅಕ್ಕಿ ಬದಲು ನೀಡುತ್ತಿದ್ದ ಹಣ, ಗೃಹಲಕ್ಷ್ಮಿ ಹಣ ನೀಡದೆ ರಾಜ್ಯದ ಜನತೆಗೆ ಗ್ಯಾರಂಟಿ ಮೋಸ ಮಾಡಿದೆ” ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

“ಮುಂದಾಲೋಚನೆ ಇಲ್ಲದ ಅವೈಜ್ಞಾನಿಕ ರೀತಿಯ ಯೋಜನೆಗಳ ಘೋಷಣೆ, ಅನುಷ್ಠಾನದಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ. ಇತ್ತ, ಜನರಿಗೆ ಬೆಲೆ ಏರಿಕೆಯ ಬರೆ ಎಳೆಯುತ್ತಿದೆ. ಈ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ” ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಏರಿದಾಗ ಸರ್ಕಾರ ಎಷ್ಟೇ ಮನವಿ ಮಾಡಿದರು ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರವು ಅಕ್ಕಿ ನೀಡಲು ನಿರಾಕರಿಸಿತ್ತು. ಈ ಬಗ್ಗೆ ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್‌ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತ್ತು. ಕೇಂದ್ರ ಸರ್ಕಾರದ ಕಡೆಯಿಂದ ಸ್ಪಂದನೆಯೇ ಸಿಗದಿದ್ದಾಗ ಕೊನೆಗೆ ರಾಜ್ಯ ಸರ್ಕಾರ ಅಕ್ಕಿ ಕೊರತೆ ಸರಿದೂಗಿಸಲು ತಲಾ ಐದು ಕೆಜಿ ಅಕ್ಕಿ ಬದಲು ಹಣ ವಿತರಿಸಲು ಆರಂಭಿಸಿತು. ತಲಾ ಒಂದು ಕೆಜಿಗೆ 34 ರೂಪಾಯಿಯಂತೆ 170 ರೂಪಾಯಿ ಖಾತೆಗೆ ಸರ್ಕಾರ ನೀಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X