ಕೊಡಗು | ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ; ಕಸಾಪ ಜಿಲ್ಲಾಧ್ಯಕ್ಷರಿಂದ ಆಹ್ವಾನ ಪತ್ರಿಕೆ ಬಿಡುಗಡೆ

Date:

Advertisements

ಕೊಡಗು ಜಿಲ್ಲೆಯ ಮಡಿಕೇರಿ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯ ಜೂನಿಯರ್‌ ಕಾಲೇಜು ಆವರಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಫೆಬ್ರವರಿ 20ರಂದು ‘ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ’ ಕಾರ್ಯಕ್ರಮ ನಡೆಯಲಿದೆ.

“ಕಾರ್ಯಕ್ರಮದಂದು ವಿಚಾರ ಸಂಕಿರಣ-ಗೀತ ಗಾಯನ-ನೃತ್ಯ ರೂಪಕ” ನಡೆಯಲಿದೆ. ಪಂಜೆ ಮಂಗೇಶರಾಯರು ರಚಿಸಿದ ಗೀತೆಗಳಿಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯನ ಮತ್ತು ನೃತ್ಯ ರೂಪಕ ನಡೆಸಿಕೊಡಲಿದ್ದಾರೆ” ಎಂದು ಕಸಾಪ ಜಿಲ್ಲಾಧ್ಯಕ್ಷ ಕೇಶವ ಕಾಮತ್ ಹೇಳಿದರು.

Advertisements

“ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜೋಷಿ ಫೆಬ್ರವರಿ 20ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆ ಮಾಡಲಿದ್ದಾರೆ.
ಅಧ್ಯಕ್ಷತೆ ಕೇಶವ ಕಾಮತ್, ಪುಸ್ತಕ ಬಿಡುಗಡೆ ಶಾಸಕ ಎ ಎಸ್ ಪೊನ್ನಣ್ಣ ಹಾಗೂ ಡಾ ಮಂತರ್ ಗೌಡ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಆಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ಮಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಆಕಾಡೆಮಿ ಅಧ್ಯಕ್ಷ ಸದಾನಂದ ಮಾವೋಜಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವರೆಸ್ ಭಾಗವಹಿಸಲಿದ್ದಾರೆ” ಎಂದರು.

“ಶಕ್ತಿ ದೈನಿಕ ಪತ್ರಿಕೆ ಸಂಪಾದಕ ಜಿ ಚಿದ್ವಿಲಾಸ್ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮಡಿಕೇರಿ ತಾಲೂಕು ಜನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್ ಟಿ ಉದ್ಘಾಟನೆ ನಡೆಸಿಕೊಡಲಿದ್ದಾರೆ.‌ ಕಾರ್ಯಕ್ರಮದಲ್ಲಿ ಸಾಹಿತಿ ಜಲಜಾ ಶೇಖರ್ ಅವರ ‘ಅಗ್ನಿಕುಂಡ’ ಕಥಾ ಸಂಕಲನ ಹಾಗೂ ಸಾಹಿತಿ ಉಳುವಂಗಡ ಕಾವೇರಿ ಉದಯ ಅವರ ‘ಮುಕ್ತಕ ಮಾಣಿಕ್ಯ’ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ. ವಿಚಾರಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ಸಪ್ರದ ಕಾಲೇಜು ಪ್ರಾಂಶುಪಾಲರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಜಯಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಕಳವು ಪ್ರಕರಣ ; ಮೂವರು ಆರೋಪಿಗಳ ಬಂಧನ

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ ಮಂಜುಳಾ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ ರಂಗಧಾಮಪ್ಪ ವಹಿಸಲಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ನಿವೃತ್ತ ಸಹ ಕಾರ್ಯದರ್ಶಿ ಡಾ ಎಸ್ ಪಿ ಮಹಾಲಿಂಗೇಶ್ವರ್ ‘ ಪಂಜೆಯವರ ಬದುಕು-ಬರಹ’ ಕುರಿತು ಉಪನ್ಯಾಸ, ಉಡುಪಿಯ ಎಂಜಿಎಂ ಕಾಲೇಜು ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ‘ಸಂಶೋಧನಾ ನೆಲೆಯಲ್ಲಿ ಪಂಜೆ’ ಕುರಿತಾದ ಉಪನ್ಯಾಸ, ಕಾಸರಗೋಡು ನಳಂದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ ಕೆ ಕಮಲಾಕ್ಷ ‘ಪಂಜೆಯವರ ಶಿಶು ಸಾಹಿತ್ಯ’ ಉಪನ್ಯಾಸ ನಡೆಸಿಕೊಡಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ್ದು, ಸಮಿತಿ ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ” ಎಂದು ತಿಳಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X