ವಿಜಯಪುರ | ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ವಿರುದ್ಧದ ಅನಿರ್ದಿಷ್ಟಾವಧಿ ಧರಣಿ ಅಂತ್ಯ

Date:

Advertisements

ನಾರಾಯಣಪುರ ಜಲಾಶಯದ ಕೃಷ್ಣ ನದಿಯ ಹಿನ್ನೀರು ಬಳಸಿ ವಿದ್ಯುತ್ ಉತ್ಪಾದಿಸುತ್ತಿರುವ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ(ಎಂಪಿಸಿಎಲ್) ವಿರುದ್ಧ ತನಿಖೆ ನಡೆಸಿ 3 ದಿನಗಳೊಳಗಾಗಿ ವರದಿ ಸಲ್ಲಿಸಲು ವಿಜಯಪುರ ಜಿಪಂ ಸಿಇಒ ಜಿಲ್ಲಾ ಮಟ್ಟದ ತಂಡ ರಚನೆ ಮಾಡಿದ್ದನ್ನು ಪರಿಗಣಿಸಿ, ಯುವಜನ ಸೇನೆ ಸಂಘಟನೆಯು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದಿದೆ.

ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ಅದೇಶಿಸಿರುವ ತಂಡ ರಚನೆಯ ಆದೇಶ ಪತ್ರವನ್ನು ಮುದ್ದೇಬಿಹಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್ ಎಸ್ ಮಸಳಿಯವವರು ಯುವಜನ ಸೇನೆ ಹೋರಾಟಗಾರರಿಗೆ ಹಸ್ತಾಂತರಿಸಿ, ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಸೇರಿದಂತೆ ಇತರರಿಗೆ ಕಬ್ಬಿನ ಹಾಲು ಕುಡಿಸುವ ಮೂಲಕ ಧರಣಿ ಅಂತ್ಯಗೊಳಿಸಿದರು.

“ತನಿಖೆಯಲ್ಲಿ ಲೋಪ ಕಂಡುಬಂದರೆ ಮತ್ತೇ ಹೋರಾಟ ಮುಂದುವರಿಸಬೇಕಾಗುತ್ತದೆ” ಎಂದು ಶಿವಾನಂದ ವಾಲಿ ಅಧಿಕಾರಿಗೆ ಎಚ್ಚರಿಸಿದರು.

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮ ಪಂಚಾಯಿತಿಗೆ ಮುರುಡೇಶ್ವರ ಪವರ್ ಕಾರ್ಪೊರೇಷನ್ ಕಂಪೆನಿ ಹಲವು ವರ್ಷಗಳಿಂದ ವಿದ್ಯುತ್ ಉತ್ಪಾದಿಸಿದ ತೆರಿಗೆ ತುಂಬದೆ ಕೊಟ್ಯಂತರ ರೂಪಾಯಿ ವಂಚಿಸಿರುವ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾ.ಪಂ ಎದುರು ಯುವಜನ ಸೇನೆ ಕಾರ್ಯಕರ್ತರು ಕಳೆದ 5 ದಿನಗಳಿಂದ ಅನಿರ್ದಿಷ್ಟಾವಧಿಯ ಧರಣಿ ನಡೆಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಳೇ ಉಂಡವಾಡಿ ನೀರು ಸರಬರಾಜು ಯೋಜನೆ ಸ್ಥಾವರಕ್ಕೆ ಹೆಚ್ ಸಿ ಮಹದೇವಪ್ಪ ಭೇಟಿ

ಧರಣಿ ಸ್ಥಳಕ್ಕೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಪಿಎಸ್‌ಐ ಸಂಜಯ್ ತಿಪ್ಪಾರೆಡ್ಡಿ ಭೇಟಿ ನೀಡಿ ಹೋರಾಟಗಾರರ ಬೇಡಿಕೆ ಆಲಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ, ಗಂಗು ತಂಗಡಗಿ ಗ್ರಾಪಂ ಮಾಜಿ ಅಧ್ಯಕ್ಷ ಸಂಗಯ್ಯ ಸಾರಂಗಮಠ, ಮಲ್ಲು ತಳವಾರ ಬಿಜ್ಜುರು ಇನ್ನಿತರರು ಇದ್ದರು.

ತನಿಖಾ ತಂಡ: ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ತನಿಖಾ ತಂಡದ ಮುಖ್ಯಸ್ಥರಾಗಿದ್ದಾರೆ. ಡಿ ಬಿ ಮೇಂದಳಿ, ಗ್ರಾಪಂ ಪಿಡಿಒ(ಆಡಳಿತ) ಉಮೇಶ ರಾಠೋಡ, ಜಿಪಂ ಎಸ್‌ಡಿಸಿ(ಆಡಳಿತ ಶಾಖೆ) ಮಹೇಶ ಮಠಪತಿ, ಜಿಪಂ ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರವಿಂದ ಬಿರಾದಾರ ತಂಡದ ಸದಸ್ಯರಾಗಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X