ಉಡುಪಿ | ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಯೊಬ್ಬರ ಸ್ವಾಭಿಮಾನ ಗೌರವಾನ್ವಿತ ಬದುಕಿನ ಮೂಲ ಪ್ರೇರಣೆ – ಡಾ. ಗಣನಾಥ ಎಕ್ಕಾರು

Date:

Advertisements

ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದಾಗಿ ಶಿಕ್ಷಣದಿಂದ ವಂಚಿತರಾದ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಬದುಕನ್ನು ಸ್ವಾಭಿಮಾನ ಹಾಗೂ ಗೌರವಯುತವಾಗಿ ನಡೆಸಲು ಪ್ರೇರೆಪಿಸಿತು ಎಂದು ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.
ಅವರು ಇಂದು ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಅವರ ಕುರಿತ ಕಾರ್ಯಕ್ರಮಗಳು ಹೆಚ್ಚಿನ ಮಹತ್ವವನ್ನು ಹೊಂದಿದ್ದು, ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದ ಅವರು, ಅಸ್ಪೃಶ್ಯತೆ ವಿರುದ್ಧ ತಮ್ಮ ಬರವಣಿಗೆ ಹಾಗೂ ಹೋರಾಟದ ಮೂಲಕ ಧನಿ ಎತ್ತುವ ಮೂಲಕ ಜನರಲ್ಲಿ ಹೊಸ ಚಿಂತನೆಯನ್ನು ಮೂಢಿಸಿದರು ಎಂದರು.

1004454808

ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ.ಪ್ರಸಾದ್ ರಾವ್ ಮಾತನಾಡಿ, ಗಾಂಧೀಜಿ ಹಾಗೂ ಅಂಬೇಡ್ಕರ್ ದೇಶದ ಅಭಿವೃದ್ಧಿ ಮತ್ತು ಸ್ವತಂತ್ರಕ್ಕಾಗಿ ಅನೇಕ ಕೊಡುಗೆಗಳನ್ನು ನೀಡಿದ್ದು, ಇಂದಿನ ಯುವ ಪೀಳಿಗೆಯು ಅವರ ಸಿದ್ಧಾಂತ ಹಾಗೂ ಮಾರ್ಗದರ್ಶಗಳನ್ನು ಅನುಸರಿಸುವ ಮೂಲಕ ಹೊಣೆಗಾರಿಕೆಯ ಜೀವನವನ್ನು ನಡೆಸಿ ಉತ್ತಮ ಸಮಾಜವನ್ನು ರೂಪಿಸಲು ಮುಂದಾಗಬೇಕು ಎಂದರು.

Advertisements

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ, ಪ್ರತಿಯೊಬ್ಬರ ಬದುಕಿನಲ್ಲಿ ಕಲಿಕೆ ಎಂಬುವುದು ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ಅಂಬೇಡ್ಕರ್ ದೇಶ ಕಂಡ ಶ್ರೇಷ್ಠ ಮೇಧಾವಿ. ಅವರ ಕುರಿತ ಅನೇಕ ವಿಚಾರ ಧಾರೆಗಳ ಅಧ್ಯಯನವು ನಮ್ಮಲ್ಲಿನ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಅಯೋಜಿಸಲಾಗಿದ್ದ ಪ್ರಬಂಧ, ಭಾಷಣ, ರಸಪ್ರಶ್ನೆ, ಚಿತ್ರಕಲಾ ಮತ್ತು ಕವನ ರಚನೆ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಐಕ್ಯೂಎಸಿನ ಸಂಚಾಲಕಿ ಶೋಭಾ ಆರ್, ಉಪನ್ಯಾಸಕಿ ಪಲ್ಲವಿ, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಕಿ ಶೈಲಜಾ ನಿರೂಪಿಸಿ, ಸಾಂಸ್ಕೃತಿಕ ಸಂಚಾಲಕಿ ಲೋಲಾಕ್ಷಿ ವಂದಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X