ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವೂ ಸಂಕಷ್ಟದಲ್ಲಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿ ಸಚಿವರಲ್ಲಿ ಅಸಮಾಧಾನವಿದೆ ಅವರ ಸ್ಥಾನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಸಚಿವ ಸಂತೋಷ ಲಾಡ್ “ಮೋದಿ ಅವರನ್ನು ಸುಪ್ರೀಂ ಎಂಬಂತೆ ಬಿಂಬಿಸಲಾಗುತ್ತಿದೆ, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಸಾಧನೆಗಳ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ನಡೆಯುತ್ತಿದೆ” ಎಂದು ಹೇಳಿದ್ದಾರೆ