ಲೈಂಗಿಕ ಕಾರ್ಯಕರ್ತೆಯರ ಪಾಲಿಗೆ ಇದ್ದೂ ಇಲ್ಲದಂತಿದೆ ‘ಚೇತನಾ ಯೋಜನೆ’

Date:

Advertisements

ಲೈಂಗಿಕ ಕಾರ್ಯಕರ್ತೆಯರಿಗೆ ಪರ್ಯಾಯ ಬದುಕು ಕಟ್ಟಿಕೊಡುವ ‘ಚೇತನಾ ಯೋಜನೆ’ ರಾಜ್ಯದಲ್ಲಿ ಕೇವಲ 1% ಲೈಂಗಿಕ ಕಾರ್ಯಕರ್ತೆಯರನ್ನು ಮಾತ್ರವೇ ತಲುಪಿದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಲೈಂಗಿಕ ಕಾರ್ಯಕರ್ತೆಯರು ವೇಶ್ಯಾ ವೃತ್ತಿಯನ್ನು ತೊರೆದು, ಸ್ವಯಂ ಉದ್ಯೋಗಕ್ಕಾಗಿ ಮತ್ತು ಗೌರವಯುತ ಜೀವನ ಕಟ್ಟಿಕೊಳ್ಳಲು ನೆರವಾಗಲು ಈ ಯೋಜನೆಯನ್ನು ತರಲಾಗಿದೆ. ಯೋಜನೆಯಡಿ 30,000 ರೂಪಾಯಿಗಳ ಆರ್ಥಿಕ ನೆರವು ನೀಡಲಾಗುತ್ತದೆ.

“ಯೋಜನೆಗೆ ಪ್ರತಿ ವ‍ರ್ಷ 2 ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತದೆ. ಈ ಮೊತ್ತ ಸಾಕಾಗುವುದಿಲ್ಲ. ನಿಧಿಯ ಕೊರತೆಯಿಂದಾಗಿ ಪ್ರತಿ ವರ್ಷ 651 ಲೈಂಗಿಕ ಕಾರ್ಯಕರ್ತೆಯರಿಗೆ ಮಾತ್ರವೇ ನೆರವು ನೀಡಲು ಸಾಧ್ಯವಾಗುತ್ತಿದೆ ಪುನರ್ವಸತಿ ಪಡೆಯಲು ಸಿದ್ಧರಿರುವ ಎಲ್ಲ ಲೈಂಗಿಕ ಕಾರ್ಯಕರ್ತೆಯರಿಗೆ ನೆರವು ನೀಡಲು ನಾಲ್ಕು ಪಟ್ಟು ಅಧಿಕ ನಿಧಿಯ ಅಗತ್ಯವಿದೆ” ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಜನರಲ್ ಮ್ಯಾನೇಜರ್ (ಚೇತನಾ ಯೋಜನೆ) ಪಾಲಿ ಎಂಜಿ ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

Advertisements

“ಯೋಜನೆಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಆಯೋಗ ಮನವಿ ಮಾಡಿದ್ದರೂ ನಿಧಿಯ ಹೆಚ್ಚಳವಾಗಿಲ್ಲ. ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿನ ಹಣದ ಕೊರತೆ ಇದಕ್ಕೆ ಕಾರಣ” ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸುಮಾರು 3 ಲಕ್ಷ ಲೈಂಗಿಕ ಕಾರ್ಯಕರ್ತೆಯರಿದ್ದಾರೆ ಎಂದು ಅಧ್ಯಯನಗಳು ಹೇಳಿವೆ. ಆದರೆ, ಸೀಮಿತ ಹಣದ ಕಾರಣ ಇಲಾಖೆಯು ಅತ್ಯಂತ ಕಡಿಮೆ ಮಂದಿಗೆ ಮಾತ್ರ ಸಹಾಯ ಮಾಡುತ್ತಿದೆ.

ಈ ಸುದ್ದಿ ಓದಿದ್ದೀರಾ?: ಶಕ್ತಿ ಯೋಜನೆ | ಮತ್ತಷ್ಟು ‘ಸ್ವಾತಂತ್ರ್ಯ’ದತ್ತ ಮಹಿಳೆಯರ ಸವಾರಿ

“2022ರವರೆಗೆ ಸಣ್ಣ ಉದ್ದಿಮೆಗಳನ್ನು ಸ್ಥಾಪಿಸಲು ಇಚ್ಛಿಸುವ ಲೈಂಗಿಕ ಕಾರ್ಯಕರ್ತೆಯರಿಗೆ ತರಬೇತಿಯನ್ನೂ ನೀಡಲಾಗಿದೆ. 3-6 ದಿನಗಳ ಕಾರ್ಯಾಗಾರವು ಯೋಜನಾ ವರದಿ ತಯಾರಿಕೆ, ಸಾಮಾನ್ಯ ಲೆಕ್ಕಪತ್ರ ನಿರ್ವಹಣೆ, ವಸ್ತು ನಿರ್ವಹಣೆ ಮತ್ತು ಮಾರುಕಟ್ಟೆ ಕುರಿತು ತರಬೇತಿ ನೀಡಿದೆ” ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

“ಕರ್ನಾಟಕದಲ್ಲಿ ವೇಶ್ಯಾವಾಟಿಕೆ ವ್ಯವಸ್ಥೆ ಇಲ್ಲದಿರುವುದರಿಂದ ಅನೇಕರು ತಮ್ಮನ್ನು ಲೈಂಗಿಕ ಕಾರ್ಯಕರ್ತೆಯರೆಂದು ಘೋಷಿಸಿಕೊಳ್ಳಲು ಹೆದರುತ್ತಿದ್ದಾರೆ” ಎಂದು ಸಾಲಿಡಾರಿಟಿ ಫೌಂಡೇಶನ್‌ನ ಕಾರ್ಯನಿರ್ವಾಹಕ ನಿರ್ದೇಶಕಿ ಶುಭಾ ಚಾಕೋ ತಿಳಿಸಿದ್ದಾರೆ.

“30,000 ರೂಪಾಯಿಯ ಸಣ್ಣ ಮೊತ್ತದಲ್ಲಿ ಅವರು ಪರ್ಯಾಯ ಜೀವನ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಅವರಿಗೆ ಸುಭದ್ರ ಜೀವನ ಕಟ್ಟಿಕೊಳ್ಳಲು ಕನಿಷ್ಠ 1,00,000 ರೂಪಾಯಿ ಬೇಕಾಗುತ್ತದೆ. ಸಹಾಯ ಧನವನ್ನು ಒಂದು ಲಕ್ಷಕ್ಕೆ ಹೆಚ್ಚಿಸಬೇಕು” ಎಂದು ಲೈಂಗಿಕ ಕಾರ್ಯಕರ್ತೆಯರ ಪರವಾಗಿ ಕೆಲಸ ಮಾಡುವ ಎನ್‌ಜಿಒಗಳು ಒತ್ತಾಯಿಸಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X