ಮಧ್ಯಪ್ರದೇಶದ 5 ವರ್ಷದ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿದ್ದರೆ, ಉದ್ಯೋಗ ನೀಡಿದ್ದು ಮಾತ್ರ ಕೇವಲ 21 ಮಂದಿಗೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.
ಜಬಲ್‌ಪುರದಲ್ಲಿ ವರ್ಷಾಂತ್ಯಕ್ಕೆ ನಡೆಯುವ ಮಧ್ಯಪ್ರದೇಶದ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ 220 ತಿಂಗಳ ಆಡಳಿತದಲ್ಲಿ 225 ಹಗರಣಗಳು ನಡೆದಿದ್ದು, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಜನತೆಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ” ಎಂದು ಆರೋಪಿಸಿದರು.
“ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೇವಲ 21 ಜನರಿಗೆ ಮಾತ್ರ ಸರ್ಕಾರಿ ನೌಕರಿ ನೀಡಿದ್ದು, ಈ ಅಂಕಿಅಂಶ ನನ್ನ ಗಮನಕ್ಕೆ ತಂದಾಗ ಇದು ನಿಜವೇ ಎಂದು ಅನುಮಾನಗೊಂಡು ಮೂರು ಬಾರಿ ಪರಿಶೀಲನೆ ನಡೆಸಿದ್ದೇನೆ” ಎಂದರು.
ಈ ಸುದ್ದಿ ಓದಿದ್ದೀರಾ? ಕೋವಿಡ್ ಲಸಿಕೆ ಪಡೆದ ಗಣ್ಯರ ಮಾಹಿತಿ ಸೋರಿಕೆ; ಟಿಎಂಸಿ ನಾಯಕ ಸಾಕೇತ್ ಗೋಖಲೆ ಆರೋಪ
ಮೇ 28 ರಂದು ಉಜ್ಜಯಿನಿಯ ಮಹಾಕಾಲ್ ಲೋಕ ಕಾರಿಡಾರ್‌ನಲ್ಲಿ ಆರು ವಿಗ್ರಹಗಳನ್ನು ಹಾನಿಗೊಳಿಸಿರುವ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ, “ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದಲ್ಲಿ 900 ಮೀಟರ್ ಕಾರಿಡಾರ್ ಅನ್ನು 856 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದರ ಮೊದಲ ಹಂತವನ್ನು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು. ಇದಕ್ಕಾಗಿ ಚೌಹಾಣ್ ಸರ್ಕಾರ ದೇವರ ವಿಗ್ರಹಗಳನ್ನು ನಾಶಪಡಿಸಿತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಸಾಕಷ್ಟು ಡಬಲ್ ಮತ್ತು ಟ್ರಿಪಲ್ ಎಂಜಿನ್ ಸರ್ಕಾರಗಳನ್ನು ನೋಡಿದ್ದೇವೆ. ಆದರೆ ಹಿಮಾಚಲ ಮತ್ತು ಕರ್ನಾಟಕದ ಜನರು ಬಿಜೆಪಿಗೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಮಧ್ಯಪ್ರದೇಶದ ಕೆಲವು ನಾಯಕರು ಅಧಿಕಾರಕ್ಕಾಗಿ ಪಕ್ಷದ ಸಿದ್ಧಾಂತವನ್ನು ತ್ಯಜಿಸಿದ್ದಾರೆ. ಅವರಿಗೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಕಲಿಸಲಿದ್ದಾರೆ” ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರನ್ನು ಹೇಳದೆ ವಾಗ್ದಾಳಿ ನಡೆಸಿದರು.
ಸಿಂಧಿಯಾ ಅವರಿಗೆ ತಮಗೆ ನಿಷ್ಠರಾಗಿರುವ ಶಾಸಕರೊಂದಿಗೆ 2020ರ ಮಾರ್ಚ್‌ನಲ್ಲಿ ಕಾಂಗ್ರೆಸ್ ತೊರೆದು ಕಮಲ್ ನಾಥ್ ಸರ್ಕಾರದ ಪತನಕ್ಕೆ ಕಾರಣರಾಗಿ ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದರು.
Let peoples of MP repeat karnataka strategy and live all together in peace ful atmosphere.