ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ

Date:

Advertisements

ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು ಭಾಷಾ ನಿಕಾಯದ ಡೀನ್ ಡಾ ಎಫ್ ಟಿ ಹಳ್ಳಿಕೇರಿ‌ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಸಮಾಜಮುಖಿ ತಿಂಗಳ ಮಾತು-6 ಕಾರ್ಯಕ್ರಮದಲ್ಲಿ ʼಕುರಿಗಾಹಿಗಳ ಬದುಕು ಮತ್ತು ಬವಣೆʼ ವಿಷಯದ ಕುರಿತು ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕನ್ನಡ ವಿಶ್ವವಿದ್ಯಾಲಯವು ತಳಸಮುದಾಯಗಳ ಅಭಿವೃದ್ಧಿಗೆ ಸದಾ ಸ್ಪಂದಿಸುತ್ತದೆ. ಕನ್ನಡ ವಿಶ್ವವಿದ್ಯಾಲಯ ಈವರೆಗೂ ಹಲವಾರು ತಳಸಮುದಾಯಗಳು ಮತ್ತು ಬುಡಕಟ್ಟು ಸಮುದಾಯಗಳ ಕುರಿತು ಸಂಶೋಧನೆಗಳನ್ನು ನಡೆಸುವ ಮೂಲಕ ಆ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಕೆಲಸದಲ್ಲಿ ತೊಡಗಿಕೊಂಡಿದೆ” ಎಂದು ತಿಳಿಸಿದರು.

Advertisements

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪಿಎಚ್‌ಡಿ ಸಂಶೋಧಕ ತಿಪ್ಪೇಸ್ವಾಮಿ ಬಿ ಅವರು ಕೊಪ್ಪಳ ಜಿಲ್ಲೆಯ ಸೀಮಿತ ಪ್ರದೇಶದಲ್ಲಿ ಕುರಿಗಾಹಿಗಳ ಬದುಕು ಮತ್ತು ಬವಣೆ ಎಂಬ ವಿಷಯದ ಕುರಿತ ಉಪನ್ಯಾಸದಲ್ಲಿ ಕುರಿಗಾಹಿಗಳ ಜೀವನ, ಧಾರ್ಮಿಕ ಆಚರಣೆ ಮತ್ತು ಅವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದರು.

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ. ಯರ‍್ರಿಸ್ವಾಮಿ ಮಾತನಾಡಿ, “ಸಂಶೋಧಕರು ಕುರಿಗಾಹಿ ಸಮುದಾಯದ ವಿಶಿಷ್ಟತೆ ಮತ್ತು ಧಾರ್ಮಿಕ ಆಚರಣೆಗಳ ಕುರಿತು ಸಂಶೋಧನೆಗೆ ಪೂರಕ ದತ್ತಾಂಶಗಳ ಸಂಗ್ರಹಣೆಯಲ್ಲಿ ತೊಡಗಿಕೊಳ್ಳಬೇಕು. ಜ್ಞಾನವನ್ನು ವೃದ್ಧಿಸಲು ತಾವೇ ಅಧ್ಯಯನ ಸೂತ್ರಗಳನ್ನು ಹುಡುಕಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಈ ಓದಿದ್ದಿರಾ? ಕೊಪ್ಪಳ | ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು, 20 ಸಾವಿರ ದಂಡ

ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಂಶೋಧನಾರ್ಥಿ ಭೋಜರಾಜ ಆರ್ ಪ್ರಾಸ್ತಾವಿಕ ಮಾತನಾಡಿದರು. ಸಂಶೋಧನಾರ್ಥಿ ಜ್ಯೋತಿ ನಿರೂಪಿಸಿದರು. ಸಂಶೋಧನಾರ್ಥಿ ತಿಪ್ಪೇಸ್ವಾಮಿಯವರು ವಂದಿಸಿದರು. ವಿವಿಧ ವಿಭಾಗಗಳ ಅಧ್ಯಾಪಕರು ಮತ್ತು ಸಂಶೋಧನಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X