ಬೆಂ.ಗ್ರಾಮಾಂತರ | ಫೆ.20ರಂದು ತುರ್ತು ರಾಸಾಯನಿಕ ಸೋರಿಕೆ ಅಣಕು ಪ್ರದರ್ಶನ

Date:

Advertisements

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ಹೊಸಕೋಟೆ ತಾಲೂಕಿನ ದೇವನಗುಂದಿ ಕೈಗಾರಿಕಾ ಪ್ರದೇಶದ ಐಒಸಿಎಲ್ ಎಲ್.ಪಿ.ಜಿ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫೆಬ್ರವರಿ 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನ ನಡೆಸಲಾಗುವುದು.

ಈ ಸಂಬಂಧ ಇಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತರಬೇತಿ ಮತ್ತು ಟೇಬಲ್ ಟಾಪ್ ಎಕ್ಸರ್ಸೈಜ್ ಸಭೆಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಾಡಲಾಯಿತು.

ಜಿಲ್ಲೆಯಲ್ಲಿ ಒಟ್ಟು 15 ಅಪಾಯಕಾರಿ ಕಾರ್ಖಾನೆಗಳು ಅಸ್ತಿತ್ವದಲ್ಲಿ ಇದ್ದು, ಅ ಕಾರ್ಖಾನೆಗಳಲ್ಲಿ ಎಲ್ಪಿಜಿ ಮತ್ತು ಪೆಟ್ರೋಲಿಯಂ ಗಳನ್ನು ಸ್ವೀಕರಣೆ,ಸಾಗಾಣಿಕೆ ಮಾಡಿ ಸಿಲಿಂಡರ್ ಅಥವಾ ಟ್ಯಾಂಕರ್ ಗಳಲ್ಲಿ ತುಂಬಿಸಿ ಗ್ರಾಹಕರಿಗೆ ನೀಡಲಾಗುತ್ತದೆ.

Advertisements
ಡಿಸಿ1

ಈ ಕಾರ್ಖಾನೆಗಳಲ್ಲಿ ಒಂದಾದ ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಬಾಟ್ಲಿಂಗ್ ಪ್ಲಾಂಟ್ ಎಲ್.ಟಿ.ಡಿ ಕಾರ್ಖಾನೆಯಲ್ಲಿ ಒಟ್ಟು 6650 ಮೆಟ್ರಿಕ್ ಟನ್ ಶೇಖರಣೆ ಮಾಡಿ ಸರಬರಾಜು ಮಾಡಲಾಗುತ್ತದೆ. ಹಾಗಾಗಿ ಈ ಕಾರ್ಖಾನೆಯು ಜಿಲ್ಲೆಯಲ್ಲಿ ಅತೀ ಅಪಾಯಕಾರಿಯಾಗಿದ್ದು, ಈ ಅಣುಕು ಪ್ರದರ್ಶನದಲ್ಲಿ ಎಮ್/ಎಸ್ ಎಲ್.ಪಿ.ಜಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್. ಬಿ.ಪಿ.ಸಿ.ಎಲ್ ಎಲ್.ಟಿ.ಡಿ, ಎಂ.ಪಿ.ಸಿ.ಎಲ್ ಎಲ್.ಟಿ.ಡಿ ಕಾರ್ಖಾನೆಯ 20 ಕಾರ್ಮಿಕರಿಗೆ ತೊಂದರೆ ಆಗುವಂತೆ ಘಟನಾವಳಿಯನ್ನು ರೂಪಿಸಲಾಗುತ್ತದೆ. ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ 3 ಕಾರ್ಖಾನೆಗಳಿಂದ ಸುಮಾರು 200 ಕಾರ್ಮಿಕರನ್ನು ಸ್ಥಳಾಂತರಿಸಿ ಹತ್ತಿರದ ಪುನರ್ನಿರ್ಮಾಣ ಕೇಂದ್ರ (ರಿಹಾಬಿಲೇಶನ್ ಸೆಂಟರ್)ಅಲ್ಲಿ ಇರಿಸಲು ನಿರ್ಧರಿಸಲಾಗಿದೆ.

ನೈಸರ್ಗಿಕ ವಿಕೋಪಗಳು, ಕೈಗಾರಿಕಾ ಪ್ರದೇಶ ವ್ಯಾಪ್ತಿಗಳಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು, ವಿಕೋಪಗಳಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಲು, ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಅಣುಕು ಪ್ರದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ.

ಡಿಸೆಂಬರ್ 04 ರಾಸಾಯನಿಕ ಸೋರಿಕೆ ನಿರ್ವಹಣಾ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗುತ್ತಿದೆ. ಅಣುಕು ಪ್ರದರ್ಶನ ಆಗುವಂತಹ ಸಂದರ್ಭದಲ್ಲಿ ಅವಶ್ಯಕತೆ ಇರುವ ತುರ್ತು ಆಂಬುಲೆನ್ಸ್ ಹಾಗೂ ಆರೋಗ್ಯ ಸೇವೆ, ಅಗ್ನಿ ಶಾಮಕದಳ, ಟ್ರಾಫಿಕ್(ವಾಹನ ದಟ್ಟಣೆ) ನಿಯಂತ್ರಣ ಹಾಗೂ ಬಂದೋಬಸ್ತ್ ವ್ಯವಸ್ಥೆಗೆ, ಇತರೆ ಇಲಾಖೆಗಳ ಜವಾಬ್ದಾರಿಗಳನ್ನು ತಿಳಿಸಲಾಯಿತು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಹಾಯಕರಾದ ರಾಜೀವ್ ಸುಲೋಚನ, ಕಾರ್ಖಾನೆಗಳು ಹಾಗೂ ಬಾಯ್ಲರ್ ಗಳ ಜಂಟಿ ನಿರ್ದೇಶಕರಾದ ನವನೀತ್ ಮೋಹನ್, ಹೊಸಕೋಟೆ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ನರಸಿಂಹ ಮೂರ್ತಿ, ಕಾರ್ಖಾನೆಗಳ ದೇವನಹಳ್ಳಿ ವ್ಯಾಪ್ತಿಯ ಉಪನಿರ್ದೇಶಕರಾದ ಸೋಮಶೇಖರ್, ನೆಲಮಂಗಲ ವ್ಯಾಪ್ತಿಯ ಕಾರ್ಖಾನೆಗಳ ಉಪನಿರ್ದೇಶಕರಾದ ತಿಮ್ಮರಾಜು, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X