ಕೊಪ್ಪಳ | ಬಂಗಾರ ಕದ್ದು ಕಲ್ಲು ಕೊಟ್ಟು ಹೋದ ನಕಲಿ ಪೊಲೀಸ್; ಮಹಿಳೆ ಕಂಗಾಲು

Date:

Advertisements

ಪೊಲೀಸರ ಸೋಗಿನಲ್ಲಿ ಬಂದವರನ್ನು ವಂಚಕರೆಂದು ತಿಳಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ.

ʼಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆ’ ಎಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಮೋಸ ಮಾಡಲಾಗಿದೆ. ಮನೆಗೆ ತೆರಳಿ ನೋಡಿದ ಮಹಿಳೆ ಕಲ್ಲುಗಳನ್ನು ಕಂಡು ಆಘಾತಗೊಂಡಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಕುಕನೂರು ಪಟ್ಟಣದ ನಿವಾಸಿ ಸುಮಾ ಅಲಬೂರ ಎಂಬವರ ಒಂದೂವರೆ ತೊಲೆಯ ಬಂಗಾರದ ಸರವನ್ನು ಪೊಲೀಸರ ಸೋಗಿನಲ್ಲಿ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

Advertisements

ಸೋಮವಾರ ಮಧ್ಯಾಹ್ನ ಸುಮಾ ಒಬ್ಬರೇ ಮನೆಯಿಂದ ಬ್ಯಾಂಕ್‌ಗೆ ಹೋಗುತ್ತಿದ್ದರು. ಆ ವೇಳೆ ಇಬ್ಬರು ಆಗಂತುಕರು ಬಂದು, ತಾವು ಪೊಲೀಸ್‌ ಎಂದು ಹೇಳಿಕೊಂಡು ಪರಿಚಯ ಮಾಡಿಕೊಂಡಿದ್ದಾರೆ. ‘ಪಟ್ಟಣದಲ್ಲಿ ಕಳ್ಳತನದ ಹಾವಳಿ ಹೆಚ್ಚಾಗಿದೆ. ಆಭರಣ ಮೈಮೇಲೆ ಧರಿಸಿ ಓಡಾಡಬೇಡಿ. ಹೀಗೆ ಓಡಾಡಿದರೆ ಯಾರಾದರೂ ಕಳ್ಳರು ಕದ್ದು ಪರಾರಿಯಾಗುತ್ತಾರೆ’ ಎಂದು ಹೇಳಿದ್ದಾರೆ.

ಮಹಿಳೆ ಅನುಮಾನಗೊಂಡು, ʼನೀವು ಪೊಲೀಸ್‌ ಡ್ರಸ್ ಹಾಕಿಲ್ಲʼ ಎಂದಿದ್ದಾರೆ. ‘ಪೊಲೀಸ್‌ ಸಮವಸ್ತ್ರದಲ್ಲಿ ಬಂದರೆ ಕಳ್ಳರು ಸಿಗುವುದಿಲ್ಲ. ಅದಕ್ಕೆ ಆ ಡ್ರಸ್ ಹಾಕಿಲ್ಲ’ ಎಂದು ವಂಚಕರು ಮಹಿಳೆಗೆ ಸಮಜಾಯಿಷಿ ಹೇಳಿ ನಂಬಿಸಿದ್ದಾರೆ. ಪಕ್ಕದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಇದೇ ರೀತಿ ಹೇಳಿ ಆತ ಬಿಚ್ಚಿಕೊಟ್ಟ ಉಂಗುರವನ್ನು ಪೇಪರ್ ಹಾಳೆಯಲ್ಲಿ ಸುತ್ತಿ ಮರಳಿ ಕೊಟ್ಟಿದ್ದಾರೆ.

ಬಳಿಕ ಸುಮಾ ಅವರ ಕೊರಳಲ್ಲಿದ್ದ ಬಂಗಾರದ ಸರವನ್ನು ಅವರಿಂದ ಪಡೆದು, ಪೇಪರ್ ಹಾಳೆಯಲ್ಲಿ ಮಡಚಿಕೊಡುವುದಾಗಿ ನಂಬಿಸಿ ಕಲ್ಲು ಸುತ್ತಿದ ಹಾಳೆಯ ಕವರ್‌ ನೀಡಿ ಮನೆಯಲ್ಲಿ ಭದ್ರವಾಗಿ ಇರಿಸುವಂತೆ ಹೇಳಿ ಸರ ಕದ್ದು ಪರಾರಿಯಾಗಿದ್ದಾರೆ.

ಈ ಸುದ್ಧಿ ಓದಿದ್ದೀರಾ?: ಕೊಪ್ಪಳ | ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಒತ್ತಾಯ

ಮಹಿಳೆ ಮನೆಗೆ ಹೋಗಿ ಹಾಳೆ ಬಿಚ್ಚಿ ನೋಡಿದಾಗ ಅದರಲ್ಲಿ ಕಲ್ಲುಗಳು ಇರುವುದು ಕಂಡು ಕಂಗಾಲಾಗಿದ್ದಾರೆ. ಕೂಡಲೇ ಕುಕನೂರು ಪೋಲಿಸ್ ಠಾಣೆಗೆ ತೆರಳಿ ನಡೆದ ವಿಷಯ ತಿಳಿಸಿದ್ದಾರೆ. ಪೊಲೀಸರ ಸೋಗಿನಲ್ಲಿ ಕಳ್ಳರು ತೋರಿದ ಚಳಕದಿಂದ ಸುಮಾ ಆತಂಕಗೊಂಡಿದ್ದಾರೆ. ಈ ಕುರಿತು ಪರಿಶೀಲನೆ ನಡೆಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X