ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಸಹೋದರರು
ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಡಬಲ್ ಬಾಡಿಗೆ ಕೇಳಿದ್ದು, ಕೊಡದೆ ಇದಕ್ಕೆ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ.
ಬೆಂಗಳೂರಿನ ಯಶವಂತಪುರದ ಸೋಫ್ ಫ್ಯಾಕ್ಟರಿ ಬಳಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆಟೋ ಚಾಲಕ ಅಶ್ವಥ್ ಎಂಬಾತ ಇಬ್ಬರು ಪ್ರಯಾಣಿಕರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ, ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿವೆ.
ಅಸ್ಸಾಂ ಮೂಲದ ಅಹ್ಮದ್ (28) ಕೊಲೆಯಾದ ಯುವಕ. ಮತ್ತೊಬ್ಬ ಯುವಕ ಅಯೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಇಬ್ಬರು ಸಹೋದರರು ಬೆಂಗಳೂರಿಗೆ ಉದ್ಯೋಗ ಅರಿಸಿ ಬಂದಿದ್ದರು. ನಗರದ ಯಶವಂತಪುರದಲ್ಲಿ ನೆಲೆಸಿದ್ದರು.
ಇಬ್ಬರು ಸಹೋದರರು ಎಂದಿನಂತೆ ರಾತ್ರಿ ವೇಳೆ ಕೆಲಸ ಮುಗಿಸಿ ಆಟೋ ಮೂಲಕ ಮನೆಗೆ ತೆರಳುತ್ತಿದ್ದರು. ಈ ವೇಳೆ, ಆಟೋ ಹತ್ತಿಸಿಕೊಂಡ ಚಾಲಕ ಪ್ರಯಾಣಿಕರಿಂದ ಡಬಲ್ ಬಾಡಿಗೆ ನೀಡುವಂತೆ ಕೇಳಿದ್ದಾನೆ.
ಇಬ್ಬರು ಸಹೋದರರು ಇದಕ್ಕೆ ಒಪ್ಪದ ಕಾರಣ ಈ ವಿಚಾರವಾಗಿ ಜಗಳವಾಗಿದೆ. ಮಾರಕಾಸ್ತ್ರಗಳಿಂದ ಆಟೋ ಚಾಲಕ ಸಹೋದರರ ಮೇಲೆ ಹಲ್ಲೆ ಮಾಡಿದ್ದಾನೆ.
ಈ ಸುದ್ದಿ ಓದಿದ್ದೀರಾ? ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ
ಹಲ್ಲೆಗೊಳಗಾದ ಇಬ್ಬರು ಸಹೋದರರ ಪೈಕಿ ಅಹ್ಮದ್ ಮೃತಪಟ್ಟಿದ್ದು, ಅಯೋಬ್‌ಗೆ ಗಂಭೀರ ಗಾಯಗಳಾಗಿವೆ. ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.