ನಾನೂ ಸೇರಿದಂತೆ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ: ಸಿದ್ದರಾಮಯ್ಯ

Date:

Advertisements
  • ‘ಜಯದೇವದಲ್ಲಿರುವ ವ್ಯವಸ್ಥೆಯನ್ನೇ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ’
  • ಸರ್ಕಾರಿ ಆಸ್ಪತ್ರೆಗಳಿಗೆ ಜಯದೇವ ಆಸ್ಪತ್ರೆ ಮಾದರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮತ್ತು ಸೇವಾ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ಆರೋಗ್ಯ ಇಲಾಖೆ ಮತ್ತು ಇಂಡಿಯನ್ ಯೂನಿಟಿ ಸೆಂಟರ್ ಸಹಯೋಗದಲ್ಲಿ ನಡೆದ ನೈಂಟಿಗೇಲ್ ಶುಶ್ರೂಷ ಅಧಿಕಾರಿಗಳ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

“ನಾನು ಸೇರಿದಂತೆ ಎಲ್ಲರೂ ಸರ್ಕಾರಿ‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತಹ ವ್ಯವಸ್ಥೆ ರೂಪಿಸಬೇಕಿದೆ. ಇದಕ್ಕೆ ಸರ್ಕಾರದ ಜತೆಗೆ ಆರೋಗ್ಯ ಸಿಬ್ಬಂದಿ ಇಚ್ಛಾಶಕ್ತಿಯಿಂದ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಜಯದೇವ ಆಸ್ಪತ್ರೆ ಒಂದು ಮಾದರಿ. ಈ ಆಸ್ಪತ್ರೆಯಲ್ಲಿ ಎಲ್ಲ ರಾಜಕಾರಣಿಗಳು ಚಿಕಿತ್ಸೆ ಪಡೆಯುತ್ತಾರೆ. ಆ ರೀತಿಯ ಗುಣಮಟ್ಟ, ಶುಚಿತ್ವ, ಶಿಸ್ತು ಜಯದೇವ ಆಸ್ಪತ್ರೆಯಲ್ಲಿದೆ. ಇಲ್ಲಿರುವ ವ್ಯವಸ್ಥೆಯನ್ನೇ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲೂ ರೂಪಿಸಲು ಸಾಧ್ಯವಿದೆ. ಇದಕ್ಕೆ ಬೇಕಾಗಿರುವುದು ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವ ಹಾಗೂ ಶ್ರದ್ಧೆ ಮಾತ್ರ” ಎಂದರು.

Advertisements

“ಲೇಡಿ ವಿತ್ ದಿ ಲ್ಯಾಂಪ್” ಹೆಸರಾಗಿದ್ದ ಶುಶ್ರೂಷಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಹೆಸರಿನ 21ನೇ ಸಾಲಿನ ಪ್ರಶಸ್ತಿ ಪಡೆದ ಎಲ್ಲರನ್ನೂ ಅಭಿನಂದಿಸಿದ ಮುಖ್ಯಮಂತ್ರಿಗಳು ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆಗಾಲವೆಂದರೆ ಮೇಯುವವರ ಸುಗ್ಗಿಕಾಲವೇ?

ರೋಗಿಗಳ ಎಲ್ಲಾ ರೀತಿಯ ಚಿಕಿತ್ಸೆಯ ನಿಜವಾದ ವಾರಸುದಾರರು ಶುಶ್ರೂಷಕಿಯರು. ಕಾಲ ಕಾಲಕ್ಕೆ ಶುಶ್ರೂಷಕಿಯರು ನಗುತ್ತಾ ಕೆಲಸ ಮಾಡಿದರೆ ಅರ್ಧ ಕಾಯಿಲೆಯೇ ಗುಣವಾಗುತ್ತದೆ. ಆತ್ಮವಿಶ್ವಾಸ ಬಹಳಷ್ಟು ರೋಗಕ್ಕೆ ಮದ್ದು. ನರ್ಸ್‌ಗಳ ಸೇವಾ ಮನೋಭಾವ ಮತ್ತು ನಗು ರೋಗಿಗಳ ಆತ್ಮವಿಶ್ವಾಸ ಹೆಚ್ಚಿಸಿ ಗುಣಮುಖರಾಗಲು ನೆರವಾಗುತ್ತದೆ ಎಂದು ಮೆಚ್ಚುಗೆ ಸೂಚಿಸಿದರು.

ಜೆಮಿಮಲ್ ಕ್ರಿಸ್ಟೋಫರ್, ಆರ್.ಪ್ರಿಯದರ್ಶಿನಿ, ಶಶಿಕುಮಾರ್, ಜಾನ್ ಮಾರ್ಷಲ್, ಭುವನೇಶ್ವರಿ, ಪ್ರೆಸಿಲ್ಲಾ ರೋಡ್ರಿಗಸ್, ಭಾರತಿ ಪಾಟೀಲ್, ಎಂ.ಎಂ.ರತಿ, ಶೈಲಜ ಬಿ.ಎಂ, ಬಿ.ರೇಣುಕಾ, ಕವಿತಾ, ಡಾ.ಸಂಜಯ್ ಎಂ ಪೀರಾಪುರ್ ಅವರಿಗೆ ಮುಖ್ಯಮಂತ್ರಿಗಳು ನೈಟಿಂಗೇಲ್ ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಿದರು.

ವೇದಿಕೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

Download Eedina App Android / iOS

X