ಮಂಗಳೂರು ನಗರದ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ ₹8 ಲಕ್ಷ ನಗದು ನೋಟುಗಳಿಗೆ ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೋಟೆಕಾರ್‌ನ ಸಫಲ್ ಎಂಬ ಗ್ರಾಹಕರೊಬ್ಬರು ಹತ್ತಿರದ ಕೆನರಾ ಬ್ಯಾಂಕ್ ಶಾಖೆಯಲ್ಲಿ ₹8 ಲಕ್ಷ ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ. ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದಿದ್ದಾರೆ. ಲಾಕರ್ ಒಳಗೆ ನೋಡಿದರೆ ಮಳೆನೀರಿನಲ್ಲಿ ಮಿಂದಿರುವ ಸ್ಥಿತಿಯಲ್ಲಿದ್ದ ಹಣ ಸಂಪೂರ್ಣವಾಗಿ ಕಪ್ಪಾಗಿತ್ತು. ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲ ನೋಟುಗಳು ಇದೇ ರೀತಿ ಆಗಿವೆ.
ಈ ಸುದ್ದಿ ಓದಿದ್ದೀರಾ? ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ: ಡಾ ಎಫ್ ಟಿ ಹಳ್ಳಿಕೇರಿ
ಆರ್‌ಬಿಐ ನಿಯಮದ ಪ್ರಕಾರ ಹಣವನ್ನು ಲಾಕರ್‌ನಲ್ಲಿ ಇಡುವಂತಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧವಿಲ್ಲವೆಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿ,
ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕೆಂದು ಮನವಿ ಮಾಡಿದ್ದಾರೆ.
“ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಇಟ್ಟರೆ ಹೀಗಾಗಿದೆ” ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ.
