ಬಳ್ಳಾರಿ | ಅತಿಥಿ ಉಪನ್ಯಾಸಕರ ಕನಿಷ್ಠ ವೇತನ ಹೆಚ್ಚಳಕ್ಕೆ ಆಗ್ರಹ

Date:

Advertisements

ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಠ ₹30,000ಕ್ಕೆ ಹೆಚ್ಚಳ ಮಾಡುವಂತೆ ಮುಂದಿನ ಬಜೆಟ್‌ನಲ್ಲಿ ಅನುದಾನ ಒದಗಿಸುವ ಸಲುವಾಗಿ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಬಳ್ಳಾರಿ ಜಿಲ್ಲೆಯ ಸಂಡೂರು ಶಾಸಕಿ ಅನ್ನಪೂರ್ಣ ತುಕರಾಂ ಅವರಿಗೆ ಮನವಿ ಸಲ್ಲಿಸಿದರು.

“ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರು ವಿದ್ಯಾರ್ಥಿಗಳ ದಾಖಲಾತಿಯಿಂದ ಹಿಡಿದು ಉತ್ತಮ ಫಲಿತಾಂಶ ಬರುವವರೆಗೂ ಶ್ರಮವಹಿಸಿ ದುಡಿಯುತ್ತಿದ್ದಾರೆ. ಆದರೆ ಈಗ ಬರುವ ವೇತನದಿಂದ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ವೇತನ ಹೆಚ್ಚಳ ಮಾಡಬೇಕು” ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದರು.

“ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಸರಿಸುಮಾರು 4,659ಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಮಾಸಿಕ ₹12,000ಕ್ಕೆ ಕಾರ್ಯವನ್ನು ನಿರ್ವಹಿಸುತ್ತಿದ್ದು, ಇಂದಿನ ದಿನಮಾನಗಳಲ್ಲಿ ನಗರ ಪ್ರದೇಶಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ನಿತ್ಯ ಬಳಸುವ ಪದಾರ್ಥಗಳ ದರ ಹೆಚ್ಚಾಗುತ್ತಿದೆ. ಹಲವಾರು ಆರ್ಥಿಕ ಸಮಸ್ಯೆಗಳು ಇದ್ದೇ ಇರುತ್ತವೆ. ಮಕ್ಕಳ ಶಾಲೆ ಶುಲ್ಕ, ವಯಸ್ಸಾದ ಅಪ್ಪ-ಅಮ್ಮನ ಆನಾರೋಗ್ಯದ ಸ್ಥಿತಿ, ಮನೆ ಬಾಡಿಗೆ, ಅಂಗಡಿ ಸಾಮಾನು, ಹೀಗೆ ಸಾಕಷ್ಟು ಸಮಸ್ಯೆಗಳನ್ನು ನಿಭಾಯಿಸುವುದರಲ್ಲಿ ಅತಿಥಿ ಉಪನ್ಯಾಸಕರ ನಿತ್ಯ ಜೀವನದ ಎತ್ತಿನ ಬಂಡಿಯ ಹಗ್ಗ-ಜಗ್ಗಾಟ ಹಳ್ಳ ಹಿಡಿಯುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಅತಿಥಿ ಉಪನ್ಯಾಸಕರು ಕನಿಷ್ಠ ವೇತನ ಪಡೆಯುತ್ತ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ. ಆದರೆ ಯಾವುದೇ ಸೇವಾ ಭದ್ರತೆ ಇಲ್ಲದಂತಾಗಿದೆ. ಹಲವು ವರ್ಷಗಳಿಂದ ಅನೇಕ ಹೋರಾಟಗಳ ಮೂಲಕ ಸಮಸ್ಯೆಗಳನ್ನು ಗಮನಕ್ಕೆ ತರಲಾಗಿದೆ. ಆದರೂ ಸರ್ಕಾರ ಮಾತ್ರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸುತ್ತಿಲ್ಲ” ಎಂದು ಆರೋಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿದ್ದ ನಗದು ನೋಟುಗಳಿಗೆ ಗೆದ್ದಲು; ಗ್ರಾಹಕನ ₹8 ಲಕ್ಷ ನಷ್ಟ

“ಬಹುತೇಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಅನೇಕ ಬೋಧನಾ ಹುದ್ದೆಗಳಿಗೆ ಖಾಯಂ ಉಪನ್ಯಾಸಕರು ಇಲ್ಲದೆ ಅತಿಥಿ ಉಪನ್ಯಾಸಕರಿಂದಲೇ ಕಾಲೇಜು ಹಾಗೂ ಬೋಧನಾ ತರಗತಿಗಳು ಮುನ್ನಡೆಯುತ್ತಿವೆ. ಖಾಯಂ ಉಪನ್ಯಾಸಕರಿಗಿಂತಲೂ ಹೆಚ್ಚು ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸುವುದು ನ್ಯಾಯಸಮ್ಮತವಾಗಿದೆ. ಹಾಗಾಗಿ ಮುಂಬರುವ ಬಜೆಟ್‌ನಲ್ಲಿ ಮುಖ್ಯಮಂತ್ರಿಯವರು ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ಕನಿಷ್ಠ ವೇತನವನ್ನು ₹30,000ಕ್ಕೆ ಹೆಚ್ಚಳ ಮಾಡುವುದಕ್ಕಾಗಿ ಅನುದಾನ ಒದಗಿಸಬೇಕು” ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕಕರು ಜಯಮ್ಮ, ಪ್ರಿಯಾ ಬಣಾಕಾರ್, ಗೀತಾ, ದಿವ್ಯ, ಸಂಪತ್ ಕುಮಾರ್, ಸಿದ್ದೇಶ್, ರೇಣುಕಾ, ತರುಣ್ ಕುಮಾರ್, ನಾಗರಾಜ್ ಹಲವಾರು ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X