‘ಆಲ್ ಈಸ್ ವೆಲ್’ ನಾಟಕ ಬದಿಗಿಡಲಿ, ಆರ್ಥಿಕ ಸ್ಥಿತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ: ವಿಜಯೇಂದ್ರ

Date:

Advertisements

ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ಕ್ರೋಢೀಕೃತ ಹಣ ಉಪಯೋಗ ಆಗುತ್ತಿದೆಯೇ ದುರುಪಯೋಗ ಆಗುತ್ತಿದೆಯೇ? ಎಂದು ಪ್ರಶ್ನಿಸಿದರು.

“ಗ್ಯಾರಂಟಿಗಳ ಬಗ್ಗೆ ನಮ್ಮ ವಿರೋಧವಿಲ್ಲ. ಅದರ ಅನುಷ್ಠಾನ ಆಗಲೇಬೇಕು. ಯುವನಿಧಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡದ ಹಣವನ್ನು ಗ್ಯಾರಂಟಿಗೆ ಬಳಸಿದ್ದಾರೆ. ಇದರ ವಿರುದ್ಧ ಆ ಸಮಾಜದ ಮುಖಂಡರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ನಮಗೆ ಅನ್ಯಾಯ ಮಾಡದಿರಿ ಎಂದು ತಾಕೀತು ಮಾಡಿ ಮನವಿ ಸಲ್ಲಿಸಿದ್ದಾರೆ” ಎಂದು ಗಮನ ಸೆಳೆದರು.

Advertisements

“ಮುಖ್ಯಮಂತ್ರಿಗಳು ಸುಳ್ಳಿನ ಸರದಾರ. ಸರಕಾರದ ಯೋಗ್ಯತೆಗೆ ಬೆಂಗಳೂರಿನ ಒಂದು ಗುಂಡಿ ಮುಚ್ಚಲು ಸಾಧ್ಯವಾಗುತ್ತಿಲ್ಲ. ಭೂಗತ ಟನೆಲ್ ಬಗ್ಗೆ ಮಾತನಾಡುತ್ತೀರಿ, ಆದರೆ ಶಾಸಕರಿಗೆ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ

“ಸಿಎಂ ಕುರ್ಚಿಗಾಗಿ ಭರ್ಜರಿ ಪೈಪೋಟಿ ನಡೆದಿದೆ. ಸಿದ್ದರಾಮಯ್ಯನವರು ಪೂರ್ಣಾವಧಿ ಸಿಎಂ ಎಂದು ಹಲವರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರೆಲ್ಲ ಸಿದ್ದರಾಮಯ್ಯನವರ ಪರ ಇದ್ದಾರೆ ಎಂಬ ಭ್ರಮೆಯಿಂದ ಹೊರಕ್ಕೆ ಬರಬೇಕಿದೆ. ಅವರೆಲ್ಲರೂ ಸಿಎಂ ಹುದ್ದೆಯ ಆಕಾಂಕ್ಷಿಗಳು” ಎಂದು ವಿಜಯೇಂದ್ರ ಹೇಳಿದರು.

“ಒಂದೆಡೆ ಕಾಂಗ್ರೆಸ್ ಹೈಕಮಾಂಡ್ ಸುಪ್ರೀಂ ಎನ್ನುತ್ತಾರೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಬೆಂಬಲಿಗರು ಹೈಕಮಾಂಡಿಗೇ ಎಚ್ಚರಿಕೆ ನೀಡಿದ್ದಾರೆ. ತಮ್ಮ ಮಾತು ಕೇಳದಿದ್ದರೆ ನಮ್ಮ ದಾರಿ ನಮಗೆ ಎಂಬ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ನಡೆಯಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಂತು ಬೇಸಿಗೆ, ತತ್ವಾರ ತಂತು ನೀರಿಗೆ, ಅನುಕೂಲ ಅವಕಾಶವಾದಿಗಳಿಗೆ!

ಜನರೇನು ಭಿಕ್ಷುಕರಾ?

“ಲೋಕಸಭಾ ಚುನಾವಣೆ ಬಂದಾಗ ಗ್ಯಾರಂಟಿ ಹಣ ನೀಡುತ್ತಾರೆ. ಉಪ ಚುನಾವಣೆ ಬಂದಾಗಲೂ ಗ್ಯಾರಂಟಿ ಅನುಷ್ಠಾನಕ್ಕೆ ಬರುತ್ತದೆ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಬಂದಾಗ ಹಣ ಕೊಡುವ ಸಾಧ್ಯತೆ ಇದೆ. ರಾಜ್ಯದ ಜನರನ್ನು ಕಾಂಗ್ರೆಸ್‌ನವರು ಭಿಕ್ಷುಕರು ಅಂದುಕೊಂಡಿದ್ದೀರಾ” ಎಂದು ಪ್ರಶ್ನಿಸಿದರು.

ಬರಗಾಲದ ಸ್ಥಿತಿ ಬಗ್ಗೆ ಎಚ್ಚೆತ್ತುಕೊಳ್ಳಿ

“ರಾಜ್ಯದಲ್ಲಿ ಭೀಕರ ಬರಗಾಲದ ಸೂಚನೆಗಳು ಈಗಾಗಲೇ ಕಾಣುತ್ತಿವೆ. ಮುಖ್ಯಮಂತ್ರಿಗಳು, ಸರಕಾರ ಎಚ್ಚೆತ್ತುಕೊಳ್ಳಲಿ. ನಿದ್ರೆಯಲ್ಲಿರುವ ಸರಕಾರವು ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಬಗೆ ಹರಿಸಬೇಕು” ಎಂದು ಒತ್ತಾಯಿಸಿದರು.

ಸಂಸದ ಪಿ.ಸಿ. ಮೋಹನ್, ಮಾಜಿ ಸಚಿವರಾದ ಗೋಪಾಲಯ್ಯ, ಶಾಸಕ ಉದಯ ಗರುಡಾಚಾರ್, ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಹಾನುಭಾವರೇ ಮೊದಲು ನಿಮ್ಮ ಆಂತರಿಕ ಕಚ್ಚಾಟ ಗಬ್ಬು ನಾತ ಹೊಡಿತಿದೆ ಅದನ್ನು ಮರೆಮಾಚಲು ಕಥೆಗಳು ಬೇಡಾ,, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದೆ, ಜಿಡಿಪಿ ದರ ಹಳ್ಳಹಿಡಿದಿದೆ,,ಭಯಂಕರ ಮೇಧಾವಿಗಳು ರಾಷ್ಟ್ರವಾದಿಗಳ ಜುಮ್ಲಾ ಮೊದಲು ದೇಶದ ಜನರಿಗೆ ಹೇಳರಿ,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X