ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಘಟಕದ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಆಯ್ಕೆಯಾಗಿದ್ದಾರೆ.
ಸಾಗರ ತಾಲೂಕಿನ ಶಾಸಕ ಗೋಪಾಲ್ ಕೃಷ್ಣ ಬೇಳೂರು ಶಿಫಾರಸಿನ ಮೇರೆಗೆ ಸಿ ಎಂ ಚಿನ್ಮಯ್ ಅವರಿಗೆ ತಮ್ಮ ಕಿರಿಯ ವಯಸ್ಸಿನಲ್ಲೇ ಎನ್‌ಎಸ್‌ಯುಐ ತಾಲೂಕು ಘಟಕದ ಅಧ್ಯಕ್ಷ ಸ್ಥಾನ ದೊರೆತಿದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ
ಶಾಸಕರ ಶಿಫಾರಸಿನಂತೆ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷ ವಿಜಯ್ ಅವರು, ಚಿನ್ಮಯ್ ಅವರನ್ನು ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, “ಪಕ್ಷದ ಸಂಘಟನೆಯೊಂದಿಗೆ ವಿದ್ಯಾರ್ಥಿ ಸಂಘಟನೆಯನ್ನು ಬಲಪಡಿಸುವಂತೆ ಕೋರುತ್ತ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಧ್ವನಿಯಾಗುತ್ತೀರೆಂದು ನಂಬಿದ್ದೇವೆ” ಎಂದು ತಿಳಿಸುವ ಮೂಲಕ ಮಹತ್ತರ ಜವಾಬ್ದಾರಿ ನೀಡಿದ್ದಾರೆ.