- ಶಾಸಕರ ಮೇಲಿನ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ
- ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಆಸ್ತಿಪಾಸ್ತಿಗಳ ಮುಟ್ಟುಗೋಲಿಗೆ ಸೂಚನೆ
ಗಂಗಾವತಿ ಶಾಸಕ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ದನ ರೆಡ್ಡಿಗೆ ಮರಳಿ ಸಂಕಷ್ಟ ಆರಂಭವಾಗಿದೆ.
ಶಾಸಕರ ಈ ಹಿಂದಿನ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ.
ಜನಪ್ರತಿನಿಧಿಗಳ ನ್ಯಾಯಲಯದ ನ್ಯಾಯಮೂರ್ತಿ ಜಯಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜನಾರ್ದನ ರೆಡ್ಡಿ 2009 ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳ ಜಪ್ತಿಗೆ ಸೂಚನೆ ನೀಡಲಾಗಿದೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿರುವ ಮತ್ತು ಅರುಣಾ ಲಕ್ಷ್ಮಿ ಹೆಸರಲ್ಲಿ ಇರುವ 77 ಆಸ್ತಿಗಳ ಜಪ್ತಿ ಮಾಡುವಂತೆ ಕೋರ್ಟ್ ಸೂಚಿಸಿದೆ.
ಕೇಸ್ ಸಂಖ್ಯೆ 135/2013ರ ಅಂತಿಮ ಆದೇಶ ಆಗುವವರೆಗೂ ಆಸ್ತಿ ಮುಟ್ಟುಗೋಲು ಹಾಕುವಂತೆ ಆದೇಶ ಹೊರಡಿಸಿದೆ. ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳು ಬಗ್ಗೆ ಸರಿಯಾದ ದಾಖಲೆ ನೀಡಲು ಕೋರ್ಟ್ ಕೋರಿದೆ.
ರೆಡ್ಡಿಗೆ ಸೇರಿರುವ ಒಟ್ಟು 124 ಆಸ್ತಿಗಳ ಜಪ್ತಿಗೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು. ಅದರಂತೆ ಕೋರ್ಟ್, ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದೆ.
ಈ ಸುದ್ದಿ ಓದಿದ್ದೀರಾ?:ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ: ಆರೋಗ್ಯ ಸಚಿವರಿಂದ ಸನ್ಮಾನ
ಇನ್ನು ಸಿಬಿಐ ಅಧಿಕಾರಿಗಳು ಪ್ರಕರಣದ ತನಿಖೆ ವೇಳೆ ಆಸ್ತಿಗಳನ್ನ ಗುರುತಿಸಿಕೊಂಡಿದ್ದರು. 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು.
ರೆಡ್ಡಿಯಷ್ಟೇ ಅಲ್ಲದೆ ಅವರ ಪತ್ನಿ ಅರುಣಾ ಅವರ ಒಡೆತನ, ಪಾಲುದಾರಿಕೆಯಲ್ಲಿರುವ ಆಸ್ತಿಗಳನ್ನೂ ಮುಟ್ಟುಗೋಲು ಹಾಕಲು ನ್ಯಾಯಾಲಯ ಆದೇಶಿಸಿದೆ.
ಎಲ್ಲ ಪಕ್ಷಗಳ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಬೇಕು.