ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯಾದ ಬಿದರೆ ಗ್ರಾಮದ ಯುವಕ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಹಲವು ಬೇಡಿಕೆಗಳನ್ನಿಟ್ಟು ಸ್ನಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸ್ನಾನ ಮಾಡುವಾಗ ಮಲೆನಾಡಿನ ಯುವಕ ದೇವೇಂದ್ರ, ಕೈಯಲ್ಲಿ ಬ್ಯಾನರ್ ಹಿಡಿದು ನೀರಿನಲ್ಲಿ ಮುಳುಗಿ ಬೇಡಿಕೆಯನ್ನಿಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ
“ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಸಂಪೂರ್ಣ ನಿಲ್ಲಬೇಕು. ಕರ್ನಾಟಕದ 25 ವರ್ಷ ಮೇಲ್ಪಟ್ಟ ಎಲ್ಲ ಯುವಕ-ಯುವತಿಯರಿಗೂ ಕಂಕಣ ಭಾಗ್ಯ ಕೂಡಿಬರಲಿ. ಕಾಲಕ್ಕೆ ತಕ್ಕಂತೆ ಮಳೆಯಾಗಿ ರೈತರ ಬೆಳೆ ಉತ್ತಮವಾಗಲಿ. ಮಲೆನಾಡ ಒತ್ತುವರಿ ಸಮಸ್ಯೆ ಬಗೆಹರಿಯಲಿ, ಪ್ರಾಣಿಗಳಿಂದ ಆಗುತ್ತಿರುವ ಪ್ರಾಣಹಾನಿ ನಿಲ್ಲಲ್ಲಿ” ಎಂಬ ಬೇಡಿಗಳು ಸೇರಿದಂತೆ ಹಲವು ಬೇಡಿಕೆಗಳು ಈಡೇರುವಂತೆ ಕುಂಭಮೇಳದಲ್ಲಿ ಸ್ನಾನ ಮಾಡುವ ಮೂಲಕ ಸಾರ್ವಜನಿಕರ ಗಮನ ಸೆಳೆದಿದ್ದಾರೆ.
