ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದ ಸುವರ್ಣ ವಿಧಾನಸೌಧ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ ಲಕ್ಷಾಂತರ ಮೌಲ್ಯದ ಪೆಟ್ರೋಲ್ ರಸ್ತೆ ಪಾಲಾಗಿದೆ.
ಬೈಲಹೊಂಗಲದ ಕಡೆ ಹೊರಟಿದ್ದ ಟ್ಯಾಂಕರ್ ವೇಗವಾಗಿ ಸಾಗುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿಭಜಕಕ್ಕೆ ಡಿಕ್ಕಿ ಹೊಡೆದು, ಹೆದ್ದಾರಿಯ ಮತ್ತೊಂದು ಬದಿಯಲ್ಲಿ ಬಿದ್ದಿದೆ.
ಲಾರಿ ಪಲ್ಟಿಯಾಗಿದ್ದರಿಂದ ಹೆದ್ದಾರಿಯಲ್ಲಿ ಸಾಕಷ್ಟು ಪ್ರಮಾಣದ ಪೆಟ್ರೋಲ್ ರಸ್ತೆ ಪಾಲಾಗಿದೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ, ಕ್ರೇನ್ ಮೂಲಕ ವಾಹನ ಮೇಲೆತ್ತಿದ್ದಾರೆ.