ವಿದ್ಯುತ್ ದರ ಏರಿಕೆ | ಸಿಎಂಗೆ ಪತ್ರ ಬರೆದ ಮೈಸೂರು ಶಾಸಕ ತನ್ವೀರ್ ಸೇಠ್

Date:

Advertisements
  • ದರ ಏರಿಕೆ ಪರಿಷ್ಕರಣೆಗೆ ಸಿಎಂ ಸಿದ್ದರಾಮಯ್ಯಗೆ ಮನವಿ
  • ಪತ್ರ ಬರೆದು ಜನರ ಸಂಕಷ್ಟ ತಿಳಿಸಿದ ತನ್ವೀರ್ ಸೇಠ್

ವಿದ್ಯುತ್ ದರ ಏರಿಕೆ ಸಮಸ್ಯೆಗಳು ಹಾಗೂ ಅದರ ಮರುಪರಿಷ್ಕರಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮೈಸೂರು ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.

ವಿದುತ್ ದರ ಏರಿಕೆ ಹಿನ್ನೆಲೆಯಲ್ಲಿ ಜನ ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿರುವ ತನ್ವೀರ್ ಸೇಠ್, ಸರ್ಕಾರ ಈ ವಿಚಾರದತ್ತ ಗಮನ ಹರಿಸಲು ಕೋರಿಕೊಂಡಿದ್ದಾರೆ. ಅವರ ಪತ್ರದ ಸಾರಾಂಶ ಈ ಕೆಳಗಿನಂತಿದೆ.

“ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಜಯ ಗಳಿಸಿದೆ. ಸರ್ಕಾರ ರಚನೆಯಾದ ದಿನವೇ 5 ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ.

“ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯವನ್ನು ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ.

ಈ ಸುದ್ದಿ ಓದಿದ್ದೀರಾ?:ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು; ಅಧಿಕಾರಿಗಳಿಗೆ ಸಚಿವ ಜಮೀರ್ ಸೂಚನೆ

ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇದರ ವಿರುದ್ಧ ರಾಜ್ಯದ ಜನ ಹೈರಾಣಾಗಿ ಸರ್ಕಾರ ಮತ್ತು ಎಸ್ಕಾಂಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ.

ಹೀಗಾಗಿ ವಿದ್ಯುತ್ ದರ ಏರಿಕೆಯನ್ನು ಮರು ಪರಿಶೀಲನೆ ಮಾಡಿ, ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ಬೆಲೆ ಏರಿಕೆ ಆದೇಶವನ್ನು ಪರಿಶೀಲಿಸಿ. ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಮರು ಜಾರಿಗೊಳಿಸಿ ಎಂದು ಕೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂದಿನ ಸಮಾಜಕ್ಕೆ ವಿದ್ಯಾರ್ಥಿ ರಾಜಕೀಯ ಸಂಘಟನೆಗಳ ಅವಶ್ಯಕತೆ ಇದೆಯೇ?

ಶಾಲಾ ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿ ರಾಜಕೀಯ ಸಂಘಟನೆಗಳನ್ನು ಕಳೆದುಕೊಂಡ ನಾವು ಈಗ...

ಕಾಂಗ್ರೆಸ್‌ನ ‘ಎಕ್ಸ್’ ಖಾತೆಯಲ್ಲಿ ಪ್ರಚೋದನಕಾರಿ ಪೋಸ್ಟ್ – ಆರೋಪ; ಎಫ್‌ಐಆರ್ ದಾಖಲು

ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್‌ನ ಅಧಿಕೃತ 'ಎಕ್ಸ್‌' ಖಾತೆಯಲ್ಲಿ ಆಕ್ಷೇಪಾರ್ಯ ಪೋಸ್ಟ್‌ ಮಾಡಲಾಗಿತ್ತು...

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

Download Eedina App Android / iOS

X