ಗೂಡು ಹಾಕಿದ್ದ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ಮೌಲ್ಯದ ಜೋಳ ಹಾಗೂ ಹಸು ತಿನ್ನುವ ಸಿಪ್ಪೆ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಗ್ರಾಮದ ರಾಜಶೇಖರ್ ಗೌಡ ಅವರಿಗೆ ಸೇರಿದ ಜೋಳದ ರಾಶಿ ಎನ್ನಲಾಗಿದೆ. ಸರ್ವೆ ನಂ 61/ಪಿ.1ರ ಒಟ್ಟು 6.5 ಎಕರೆ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ರಾಶಿ ಹಾಗೂ ಸಿಪ್ಪೆಗೆ ಬೆಂಕಿ ಹಚ್ಚಲಾಗಿದೆ. ಸುಮಾರು ₹15 ಲಕ್ಷ ಮೌಲ್ಯದ ಜೋಳದ ತೆನೆ ಹಾಗೂ ದನಗಳು ತಿನ್ನುವ ಸಿಪ್ಪೆ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು.
ಗ್ರಾಮ ಲೆಕ್ಕಾಧಿಕಾರಿ ಮೌನೇಶ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ವರದಿ ಪಡೆದು ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ?: ರಾಯಚೂರು | ಪ್ರಯಾಗರಾಜ್‌ನ ಕುಂಭಮೇಳದಲ್ಲಿ ಸೂಕ್ತ ವ್ಯವಸ್ಥೆಯಿಲ್ಲದೆ ಹಲವು ಮಂದಿ ಸಾವು: ಎನ್ ಎಸ್ ಬೋಸರಾಜ್
ಜೋಳದ ರಾಶಿಗೆ ಬೆಂಕಿ ಹಚ್ಚಿದ ಪ್ರಕರಣ ಕುರಿತು ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಜತೆಗೆ ನಷ್ಟಕ್ಕೆ ಒಳಗಾದ ರೈತ ಎನ್ ರಾಜಶೇಖರ್ ಗೌಡ ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.
