2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 04ರವರೆಗೆ ನಡೆಯಲಿವೆ. ಬೆಂಗಳೂರಿನಲ್ಲಿ ಪರೀಕ್ಷೆ ಬರೆಯುಲಿರುವ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಹಿ ಸುದ್ದಿ ನೀಡಿದೆ. ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ ಒದಗಿಸುವುದಾಗಿ ಘೋಷಿಸಿದೆ.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ‘ಹಾಲ್ ಟಿಕೆಟ್’ (ಪ್ರರೀಕ್ಷೆ ಪ್ರವೇಶ ಪತ್ರ) ತೋರಿಸಿ, ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ಹೇಳಿದೆ. ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು, ಪರೀಕ್ಷಾ ಕೇಂದ್ರಗಳ ಸಮೀಪವೇ ಬಸ್‌ಗಳ ನಿಲುಗಡೆ ಇರಲಿದೆ.
ಆದರೆ, ಬಿಎಂಟಿಸಿಯ ವೋಲ್ವೋ ಬಸ್‌ಗಳಲ್ಲಿ ಮಾತ್ರ ಉಚಿತ ಪ್ರಯಾಣ ಇರುವುದಿಲ್ಲ ಎಂದೂ ತಿಳಿಸಿದೆ.
ಕೆಎಸ್‌ಆರ್‌ಟಿಸಿ ಕೂಡ ಉಚಿತ ಪ್ರಯಾಣ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.