ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇಖಾ ಗುಪ್ತಾ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಪ್ರಮಾಣವಚನ ಬೋಧಿಸಿದ್ದಾರೆ.
ಪ್ರಮಾಣವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ಅಧಿಕಾರದಲ್ಲಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಿಯಾಗಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, ಬರೋಬ್ಬರಿ 27 ವರ್ಷಗಳ ಬಳಿಕ ಮತ್ತೆ ದೆಹಲಿಯಲ್ಲಿ ಅಧಿಕಾರಕ್ಕೇರಿದೆ. ದೆಹಲಿಗೆ ಮಹಿಳಾ ಮುಖ್ಯಮಂತ್ರಿಯನ್ನು ನೇಮಿಸಿದೆ.
ಈ ವರದಿ ಓದಿದ್ದೀರಾ?: ಮೊದಲ ಬಾರಿಗೆ ಶಾಸಕಿಯಾಗಿ ದೆಹಲಿ ಮುಖ್ಯಮಂತ್ರಿ ಹುದ್ದೆಗೇರಿದ ರೇಖಾ ಗುಪ್ತಾ; ಯಾರಿವರು?
11 ವರ್ಷಗಳ ಕಾಲ ದೆಹಲಿಯಲ್ಲಿ ಅಧಿಕಾರದಲ್ಲಿದ್ದ ಎಎಪಿ ಕೇವಲ 22 ಸ್ಥಾನಗಳನ್ನು ಪಡೆದು, ಅಧಿಕಾರ ಕಳೆದುಕೊಂಡಿದೆ.