ವಿಜಯಪುರ | ತೆಲಂಗಾಣ ರಾಜ್ಯಕ್ಕೆ ಕೃಷ್ಣಾ ನದಿ ನೀರು ಹರಿಸದಂತೆ ರೈತ ಸಂಘ ಮನವಿ

Date:

Advertisements

ತೆಲಂಗಾಣ ರಾಜ್ಯದ ರಂಗರೆಡ್ಡಿ ಜಿಲ್ಲೆಗೆ ಕೃಷ್ಣಾ ನದಿಯ ನೀರು ಹರಿಸಬಾರದು ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ಮುಖ್ಯ ಅಭಿಯಂತರರಿಗೆ ಇಂದು ಮನವಿ ಸಲ್ಲಿಸಲಾಯಿತು.

ಲಾಲ್‌ಬಹದ್ದೂರ್ ಶಾಸ್ತ್ರೀ ಜಲಾಶಯದಿಂದ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ಜುರಾಲಾ ಅಣೆಕಟ್ಟಿಗೆ 5 ಟಿಎಂಸಿ ನೀರನ್ನು ಕುಡಿಯಲು ಹಾಗೂ ಕೃಷಿಗಾಗಿ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ತೆಲಂಗಾಣ ರಾಜ್ಯ ಸರ್ಕಾರ ಪತ್ರ ಬರೆದಿದೆ. ಈ ಹಿನ್ನೆಲೆ ನೀರು ಹರಿಸಬಾರದು ಎಂದು ರೈತ ಸಂಘ ಒತ್ತಾಯಿಸಿದೆ.

“ಸದ್ಯ ಆಲಮಟ್ಟಿ ಲಾಲ್‌ ಬಹದ್ದೂರ್ ಶಾಸ್ತ್ರೀ ಜಲಾಶಯ ಹಾಗೂ ನಾರಾಯಣಪುರ ಬಸವ ಸಾಗರ ಜಲಾಶಯಗಳಲ್ಲಿ ಕೇವಲ 60 ಟಿಎಂಸಿ ನೀರು ಮಾತ್ರ ಲಭ್ಯವಿದೆ. ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಜರುಗಿದ ಐಸಿಸಿ ಸಭೆಯ ನಿರ್ಣಯದಂತೆ ಮಾರ್ಚ್ 26ರವರೆಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಹರಿಸಲು ಇನ್ನೂ 26 ಟಿಎಂಸಿ ನೀರಿನ ಅಗತ್ಯವಿದೆ. ಏಪ್ರಿಲ್ ತಿಂಗಳಲ್ಲಿ ಒಂದು ವೇಳೆ ರೈತರಿಗೆ ನೀರು ಅಗತ್ಯಬಿದ್ದರೆ ಇನ್ನು 8 ಟಿಎಂಸಿ ನೀರು ಹರಿಸಬೇಕಾಗುತ್ತದೆ. ಬೇಸಿಗೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಜಿಲ್ಲೆಯ ಎಲ್ಲ ಕೆರೆಗಳನ್ನು ಭರ್ತಿ ಮಾಡಬೇಕಾಗುತ್ತದೆ. ವರ್ಷದ ಜೂನ್ ಅಂತ್ಯದವರೆಗೂ ಕುಡಿಯುವ ನೀರು ಹಾಗೂ ಜಲಚರಗಳಿಗೆ ಸುಮಾರು 35 ಟಿಎಂಸಿ ನೀರು ನಾರಾಯಣಪುರ ಹಾಗೂ ಆಲಮಟ್ಟಿ ಜಲಾಶಯಗಳಲ್ಲಿ ಕಾಯ್ದಿರಿಸಬೇಕಾಗುತ್ತದೆ. ಸದ್ಯ ಸಂಗ್ರಹವಿರುವ ನೀರಿನಲ್ಲಿ ಕೂಡಗಿ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಯಚೂರಿನ ಎರಮರಸ್‌ಗೆ ಬಳ್ಳಾರಿಯ ಜಿಂದಾಲ್ ಸೇರಿದಂತೆ ಮುಂತಾದವುಗಳಿಗೆ ನೀರು ಕೊಡಬೇಕಾಗುತ್ತದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಿರುವಾಗ ಬೇರೆ ರಾಜ್ಯಕ್ಕೆ ನೀರು ಹರಿಸಿ ನಮ್ಮ ರೈತರನ್ನು ಹಾಗೂ ಜನರನ್ನು ನೀರಲ್ಲದೆ ಪರದಾಡುವ ಸ್ಥಿತಿಗೆ ತಳ್ಳುವುದು ಸರಿಯಲ್ಲ” ಎಂದು ಸಂಘದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Advertisements

“ಎರಡು ರಾಜ್ಯಗಳಲ್ಲಿ ಒಂದೇ ಸರ್ಕಾರವಿದ್ದು, ಇದನ್ನು ಆಧರಿಸಿ ರಾಜಕೀಯ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ನೀರು ಹರಿಸಬಾರದು. ಕೃಷ್ಣಾ ನ್ಯಾಯಾಧೀಕರಣದ ನ್ಯಾಯಮೂರ್ತಿ ಬ್ರಿಜೇಷ್ ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧೀಕರಣದ 2ನೇ ತೀರ್ಪಿನ ವಿರುದ್ಧ ತೆಲಂಗಾಣ ಸರ್ಕಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಸಿ ಆಲಮಟ್ಟಿ ಜಲಾಶಯದ ನೀರಿನ ಮಟ್ಟವನ್ನು ಹೆಚ್ಚಿಸದಂತೆ ತಡೆಹಿಡಿದಿದೆ. ತೆಲಂಗಾಣ ಸರ್ಕಾರ ಸಾರ್ವಜನಿಕ ಹಿತಾಸಕ್ತಿ ರಿಟ್ ಹಿಂಪಡೆದು ಆಲಮಟ್ಟಿ ಲಾಲ್‌ಬಹದ್ದೂರ್ ಶಾಸ್ತ್ರೀ ಜಲಾಶಯದ ನೀರಿನ ಸಂಗ್ರಹದ ಮಟ್ಟವನ್ನು ಹೆಚ್ಚಿಸಲು ಸಹಕಾರ ನೀಡಿದರೆ ಸಮುದ್ರಕ್ಕೆ ವ್ಯರ್ಥವಾಗಿ ಹೋಗುವ ನೀರನ್ನು ಆಲಮಟ್ಟಿಯಲ್ಲಿ ಸಂಗ್ರಹಿಸಿ ಹೆಚ್ಚುವರಿ ನೀರಿನ ಲಭ್ಯತೆಯನ್ನು ಆಧರಿಸಿ ಅಗತ್ಯದ ಅನುಗುಣವಾಗಿ ಬೇಕಾದರೆ ತೆಲಂಗಾಣಕ್ಕೆ ನೀರು ಕೊಡಬಹುದು” ಎಂದರು.

ಸಾರ್ವಜನಿಕ ಹಿತಾಸಕ್ತಿ ರಿಟ್‌ನ್ನು ತೆಲಂಗಾಣ ಸರ್ಕಾರ ಹಿಂಪಡೆಯಬೇಕು. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ಅವಳಿ ಜಿಲ್ಲೆಯ ರೈತರು ನೀರು ಹರಿಸುವುದಕ್ಕೆ ಅವಕಾಶ ಕೊಡುವದಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ಪಕ್ಷದ ಮುಖ ನೋಡಿ ನೀರು ಬಿಟ್ಟರೆ ಅಖಂಡ ಕರ್ನಾಟಕದ ರೈತ ಸಂಘದ ವತಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರಗಳು ಸಹಕಾರ ಕ್ಷೇತ್ರದ ಮೇಲೆ ಲಕ್ಷ್ಯ ತೋರುತ್ತಿಲ್ಲ: ಸಚಿವ ಶಿವಾನಂದ ಪಾಟೀಲ

ಈ ವೇಳೆ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಹೊನಕೆಪ್ಪ ತೆಲಗಿ, ಪ್ರಹ್ಲಾದ್ ನಾಗರಾಳ, ಯಮನಪ್ಪ ಸರೊರ, ಉಮೇಶ ವಾಲಿಕಾರ, ವಿಠ್ಠಲ್ ಬಿರಾದಾರ, ಲಾಲ್‌ಸಾಬ್ ಹಳ್ಳೊರು,‌ ಸಾಹೇಬ ಗೌಡ ಹೊಸೂರು ಹಾಗೂ ಶಿವಪ್ಪ ಲಮಾಣಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X