ವಿಜಯಪುರ | ದಲಿತ ನೌಕರರ ಮೇಲೆ ದೌರ್ಜನ್ಯ; ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿ ಧರಣಿ

Date:

Advertisements

ದಲಿತ ನೌಕರರ ಮೇಲೆ ದೌರ್ಜನ್ಯ ಎಸಗಿದವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲು ಆಗ್ರಹಿಸಿ ದೌರ್ಜನ್ಯಕ್ಕೆ ಒಳಗಾದ ನೌಕರರ ಕುಟುಂಬಸ್ಥರು ಹಾಗೂ ಲೋಣಿ ಬಿಕೆ ಗ್ರಾಮದ ಮುಖಂಡರು ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಡಿವೈಎಸ್‌ಪಿ ಕಚೇರಿ ಮುಂದೆ ಧರಣಿ ನಡೆಸಿದರು.

ಲೋಣಿ ಬಿಕೆ ಗ್ರಾಮದ ಶಾಂತಿ ನೀಕೇತನ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭಗವಾನ ಬುದ್ಧ ಬನಸೋಡೆ ಹಾಗೂ ರವೀಂದ್ರ ಕಾಂಬಳೆ ಎಂಬುವವರಿಗೆ ಅದೇ ಗ್ರಾಮದ ಗುರುಶಾಂತಪ್ಪ ಕಾಪಸೆ, ಬಾಪುರಾಯ ಲೋಣಿ ಹಾಗೂ ಇಬ್ಬರು ಸರ್ವೇಯರ್ ಸೇರಿಕೊಂಡು ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ, ಹಲ್ಲೆ ಮಾಡಿದ್ದು‌, ಜೀವ ಬೇದರಿಕೆ ಕೂಡ ಹಾಕಿದ್ದಾರೆ. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೂ ಇಲ್ಲಿಯವರೆಗೆ ಪ್ರಕರಣ ದಾಖಲಿಸಿಕೊಂಡಿರುವುದಿಲ್ಲ. ಪ್ರಕರಣ ದಾಖಲಿಸುವವರೆಗೆ ಧರಣಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಮನವಿಯಲ್ಲಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 02 20 at 3.41.11 PM

ಸೌಕತ್ ಅಲಿ ಸಜಾಗೀರದಾರ, ಪ್ರಕಾಶ ಝುಲಪಿ, ಶಿದಾನಂದ ಜಿತ್ತಿ, ಶ್ರೀಮಂತ ಝಲಪಿ, ಗುರುಬಸಪ್ಪ ಝಲಪಿ, ದಯಾನಂದ ಬಾಳಾಬಗಿ, ಮರೇಪ ಬನಸೋದೆ, ಖಾಜಪ ಬನಸೋದೆ, ಗುರುಸಿದ್ದ ಬನಸೋದೆ, ಗಜಪ್ಪ ಬನಸೋಣೆ, ಶೈಲ ಬನಸೋದೆ, ಶ್ರೀಶೈಲ ಉಟಗಿ, ಅಮಸಿದ್ದ ಝಲಪಿ, ಖಾಜಾಸಾಬ ಪಠಾಣ, ಚಾಂದ್ ಅತ್ತಾರ ಮೊದಲಾದವರು ಧರಣಿಯಲ್ಲಿ ಇದ್ದರು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ತೆಲಂಗಾಣ ರಾಜ್ಯಕ್ಕೆ ಕೃಷ್ಣಾ ನದಿ ನೀರು ಹರಿಸದಂತೆ ರೈತ ಸಂಘ ಮನವಿ

ಧರಣಿ ನಿರತ ಸ್ಥಳಕ್ಕೆ ಡಿವೈಎಸ್‌ಪಿ ಜಗದೀಶ ಭೇಟಿ ನೀಡಿ, ತಮ್ಮ ಪ್ರಕರಣವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತದೆ. ತಾವು ಧರಣಿ ಕೈ ಬಿಡಬೇಕು ಎಂದು ತಿಳಿಸಿದರು. ಪ್ರಕರಣ ದಾಖಲಾಗುವವರೆಗೆ ಧರಣಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಧರಣಿ ನಿರತರು ಪಟ್ಟು ಹಿಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X