ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ʼನಿಮ್ಮೊಂದಿಗೆ ನಾವುʼ ಕಲಾವಿದರ ನಡೆ-ಜನಸಾಮನ್ಯರ ಕಡೆ ಕಾರ್ಯಕ್ರಮವನ್ನು (ಪ್ರಾತ್ಯಕ್ಷಿಕೆ, ವಿಮರ್ಶೆ, ಪ್ರದರ್ಶನ) ಫೆ.23ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ಸಂಜೀವಕುಮಾರ ಹಂಚಾಟೆ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರಡ್ಡಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು ಎಂದು ಅಕಾಡೆಮಿ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಿಮಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು: ಡಿಸಿ ನಲಿನ್ ಅತುಲ್
ಕಾರ್ಯಕ್ರಮದ ನಿಮಿತ್ತ ಚಿತ್ರಕಲಾ ಪ್ರದರ್ಶನ ಹಾಗೂ ಶಾಲಾ ಮಕ್ಕಳ ಕಲಾಶಿಬಿರವು ನಡೆಯಲಿದೆ. ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಸಂಚಾಲಕ ವೆಂಕಟೇಶ ಬಡಿಗೇರ ಹಾಗೂ ರಿಜಿಸ್ಟ್ರಾರ್ ಬಿ.ನೀಲಮ್ಮ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
