ಕೆಸಿಆರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ವ್ಯಕ್ತಿಯ ಹತ್ಯೆ; ತೆಲಂಗಾಣದಲ್ಲಿ ರಾಜಕೀಯ ವಿವಾದ

Date:

Advertisements

ಕಾಳೇಶ್ವರಂ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಹೊರಿಸಿದ್ದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದ ವ್ಯಕ್ತಿಯ ಕೊಲೆಯಾಗಿದ್ದು ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕುಟುಂಬ ಸದಸ್ಯರು ಮತ್ತು ತೆಲಂಗಾಣದ ಆಡಳಿತಾರೂಢ ಕಾಂಗ್ರೆಸ್ ಈ ಹತ್ಯೆ ವಿಚಾರದಲ್ಲಿ ಬಿಆರ್‌ಎಸ್ ಕಡೆಗೆ ಬೆರಳು ತೋರಿಸಿದೆ. ಆದರೆ ಬಿಆರ್‌ಎಸ್ ಮಾತ್ರ ಆರೋಪವನ್ನು ತಳ್ಳಿಹಾಕಿದೆ.

ಎನ್ ರಾಜಲಿಂಗಮೂರ್ತಿ (50) ಅವರನ್ನು ಬುಧವಾರ ತಡರಾತ್ರಿ ಜಯಶಂಕರ್ ಭೂಪಾಲಪಲ್ಲಿ ಪಟ್ಟಣದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪರಿಚಿತರು ಇರಿದು ಹತ್ಯೆ ಮಾಡಿದ್ದಾರೆ. ಕೆಲವು ಭೂ ವಿವಾದಗಳು ಈ ಹತ್ಯೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಬೈಕ್‌ಗಳಲ್ಲಿ ಬಂದ ಆರೋಪಿಗಳು ರಾಜಲಿಂಗಮೂರ್ತಿ ಅವರ ತಲೆಗೆ ಕಬ್ಬಿಣದ ರಾಡ್‌ನಿಂದ ಹೊಡೆದು ನಂತರ ಅವರನ್ನು ಇರಿದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವ್ಯಕ್ತಿಯ ಹತ್ಯೆ

Advertisements

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣ ರಸ್ತೆಗಳು ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ, “ಬಿಆರ್‌ಎಸ್ ತನ್ನ 10 ವರ್ಷಗಳ ಆಡಳಿತದಲ್ಲಿ ಕೊಲೆ ರಾಜಕೀಯವನ್ನು ಪ್ರೋತ್ಸಾಹಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಎನ್ ರಾಜಲಿಂಗಮೂರ್ತಿ ಅವರ ಹತ್ಯೆಯನ್ನು ಖಂಡಿಸಿದ ಸಚಿವರು, “ಕಾಲೇಶ್ವರಂ ಯೋಜನೆಯಲ್ಲಿ ಬಿಆರ್‌ಎಸ್ ‘ಲೂಟಿ’ ಮಾಡಿರುವುದನ್ನು ಪ್ರಶ್ನಿಸಿದ್ದಕ್ಕಾಗಿ ರಾಜಲಿಂಗಮೂರ್ತಿ ಅವರನ್ನು ಕೊಲೆ ಮಾಡಲಾಗಿದೆ” ಎಂದು ದೂರಿದ್ದಾರೆ.

ಈ ಕೊಲೆಯ ಹಿಂದೆ ಮಾಜಿ ಶಾಸಕ ಗಂದ್ರ ವೆಂಕಟರಮಣ ರೆಡ್ಡಿ ಸೇರಿದಂತೆ ಬಿಆರ್‌ಎಸ್ ನಾಯಕರು ಇದ್ದಾರೆ ಎಂದು ರಾಜಲಿಂಗಮೂರ್ತಿ ಅವರ ಕುಟುಂಬ ಸದಸ್ಯರು ಮತ್ತು ಅವರ ಪತ್ನಿ ಹೇಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಬಿಆರ್‌ಎಸ್, ಕಾಂಗ್ರೆಸ್ ಪಕ್ಷವು ಸತ್ಯ ತಿಳಿಯದೆ ತಮ್ಮ ವಿರುದ್ಧ ಆರೋಪಗಳನ್ನು ಹೊರಿಸುತ್ತಿದೆ ಎಂದಿದೆ. ಆಡಳಿತ ಪಕ್ಷವು ಬಿಆರ್‌ಎಸ್ ಪಕ್ಷ, ಕೆಸಿಆರ್ ಮತ್ತು ಶಾಸಕ ಟಿ ಹರೀಶ್ ರಾವ್‌ಗೂ ಕೊಲೆಗೂ ಹೊಂದಿಕೆ ಮಾಡಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ. ಸ್ಥಳೀಯ ಭೂ ವಿವಾದದಿಂದಾಗಿ ಕೊಲೆ ನಡೆದಿದೆ ಎಂದು ಬಿಆರ್‌ಎಸ್ ನಾಯಕ ವೆಂಕಟರಮಣ ರೆಡ್ಡಿ ಹೇಳಿದರು.

ಇದನ್ನು ಓದಿದ್ದೀರಾ? ತೆಲಂಗಾಣ | ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ

ಕೆಲವು ಜನರ ಒತ್ತಡಕ್ಕೆ ಮಣಿದು ಮೃತಪಟ್ಟ ವ್ಯಕ್ತಿಯ ಪತ್ನಿ ತಮ್ಮ ಮೇಲೆ ಆರೋಪಗಳನ್ನು ಹೊರಿಸುತ್ತಿದ್ದಾರೆ. ಸಿಬಿಐ ಸೇರಿದಂತೆ ಯಾವುದೇ ಸಂಸ್ಥೆಯ ತನಿಖೆಗೆ ಸಿದ್ಧ ಎಂದಿದ್ದಾರೆ.

ಇನ್ನು ಘಟನೆಯ ನಂತರ, ಮೃತ ವ್ಯಕ್ತಿಯ ಕುಟುಂಬ ಸದಸ್ಯರು ಬುಧವಾರ ತಡರಾತ್ರಿ ಪ್ರತಿಭಟನೆ ನಡೆಸಿದ್ದರು. ಭೂಮಿಯ ವಿವಾದದಲ್ಲಿ ಕೊಲೆಯಾಗಿದೆ ಎಂದು ಮೃತ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ನಂತರ ಕುಟುಂಬ ಸದಸ್ಯರು ಸಾವಿಗೆ ಬಿಆರ್‌ಎಸ್‌ನೊಂದಿಗೆಡ ಸಂಬಂಧ ಹೊಂದಿದ್ದ ಕೆಲವು ನಾಯಕರು ಕಾರಣ ಎಂದು ಆರೋಪಿಸಿದ್ದಾರೆ ಎಂದು ಹೇಳಲಾಗಿದೆ.

ಕಾಲೇಶ್ವರಂ ನೀರಾವರಿ ಯೋಜನೆಯ ಭಾಗವಾದ ಮೇಡಿಗಡ್ಡ ಬ್ಯಾರೇಜ್‌ನ ಕೆಲವು ಕಂಬಗಳನ್ನು ಮುಳುಗಿಸಿದ ನಂತರ, ಯೋಜನೆಯ ನಿರ್ಮಾಣದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಬಿಆರ್‌ಎಸ್ ಅಧ್ಯಕ್ಷ ಚಂದ್ರಶೇಖರ್ ರಾವ್ (ಕೆಸಿಆರ್) ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ರಾಜಲಿಂಗಮೂರ್ತಿ 2023ರ ಅಕ್ಟೋಬರ್ ತಿಂಗಳಿನಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಕೆಸಿಆರ್ ಮತ್ತು ಅವರ ಸೋದರಳಿಯ, ಮಾಜಿ ಸಚಿವ ಟಿ ಹರೀಶ್ ರಾವ್ ನಂತರ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X