ತುಮಕೂರು | ಸಾಹೇ ವಿ.ವಿ.ಯ ನೂತನ ಕುಲಸಚಿವರಾಗಿ ಡಾ.ಅಶೋಕ್ ಮೆಹ್ತಾ ಅಧಿಕಾರ ಸ್ವೀಕಾರ

Date:

Advertisements

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವಂತಹ ತುಮಕೂರಿನ ಸಾಹೇ ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ. ಅಶೋಕ್ ಮೆಹ್ತಾ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ. ಸಾಹೇ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಡಾ.ಕೆ.ಬಿ ಲಿಂಗೇಗೌಡರವರು ಡಾ. ಅಶೋಕ್ ಮೆಹ್ತಾ ರವರಿಗೆ ಹೂಗುಚ್ಚವನ್ನು ನೀಡುವ ಮೂಲಕ ಅಭಿನಂದನೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯದ ಪರೀಕ್ಷಾಂಗ ನಿಯಂತ್ರಕರಾದ ಡಾ.ಗುರುಶಂಕರ್, ಸಾಹೇ ವಿವಿಯ ಕುಲಾಧಿಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಪ್ರವೀಣ್ ಕೊಡುವ, ಹಾಗೂ ಸಾಹೇ ವಿಶ್ವವಿದ್ಯಾನಿಲಯದ ಆಡಳಿತ ವರ್ಗದವರು ಹಾಜರಿದ್ದರು.

1001078851

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಶೋಕ್ ಮೆಹ್ತಾ ಅವರು  (ತಾಂತ್ರಿಕ ಶಿಕ್ಷಣ ಗುಣಮಟ್ಟ ಸುಧಾರಣೆ ಕಾರ್ಯಕ್ರಮ) ಕಾರ್ಯಕ್ರಮದ ನಿರ್ದೇಶಕರಾಗಿ, ಎಸ್‌ಎಸ್‌ಐಟಿ ಎಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಮತ್ತು ತರಬೇತಿಯ ವಿಭಾಗದ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಸಾಹೇ ವಿವಿಯ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

Advertisements
1001078852

ಬೋಧನೆ ಮತ್ತು ಆಡಳಿತ ನಿರ್ವಹಣೆಯಲ್ಲಿ ಅನುಭವ ಹೊಂದಿರುವ ಅವರು ಹಲವಾರು ಅಂತಾರಾಷ್ಟ್ರೀಯ, ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಇದರ ಜತೆಗೆ ಹಲವಾರು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಸಮ್ಮೇಳನಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಸಂಶೋಧನಾ ವಿಷಯಗಳನ್ನು ಮಂಡಿಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಅವರು ಸಾಹೇ ವಿವಿಯಲ್ಲಿ ನೂತನ ಕುಲಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X