ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯವಿಲ್ಲ: ಸಚಿವ ಸಂಪುಟ ಸಭೆಯ ಪ್ರಮಖ ನಿರ್ಧಾರಗಳೇನು?

Date:

Advertisements

ಸರ್ಕಾರದ ಹಲವು ಇಲಾಖೆಗಳಲ್ಲಿ ಸಿವಿಲ್ ಕಾಮಗಾರಿಗಳ ಹಲವಾರು ಅಂದಾಜು ಅಧಿಕ ಹೆಚ್ಚುವರಿಗಳಿಂದ ಪರಿಷ್ಕೃತ ಗೊಳ್ಳುತ್ತಿರುವ ಬಗ್ಗೆ ನಿವೃತ್ತ ಪ್ರಧಾನ ಅಭಿಯಂತರ ಗುರುಪ್ರಸಾದ್ ನೇತೃತ್ವದಲ್ಲಿ ರಚಿಸಿದ್ದ ಕಾಮಗಾರಿ ಅಂದಾಜುಗಳು ತಯಾರಿಕಾ ಸಮಿತಿಯು ಹಲವು ಶಿಫಾರಸ್ಸು ಮಾಡಿದ್ದು, ಶಿಫಾರಸ್ಸುಗಳನ್ನು ಚರ್ಚಿಸಿ, ಉಪಮುಖ್ಯಮಂತ್ರಿ ಗಳ ನೇತೃತ್ವದಲ್ಲಿ ಸಭೆ ನಡೆಸಿ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಸಚಿವರು ಹಾಗೂ ಕಾರ್ಯದರ್ಶಿಗಳು ಸಭೆ ಸೇರಿ ಪರಿಶೀಲಿಸಿದ ಬಳಿಕ ಟಿಪ್ಪಣಿಗಳ ಸಮೇತ ಮುಂದಿನ ಸಚಿವ ಸಂಪುಟದಲ್ಲಿ ಸಲ್ಲಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್‌ ಅವರು ಸಚಿವ ಸಂಪುಟ ಸಭೆಯ ತೀರ್ಮಾನಗಳ ಬಗ್ಗೆ ಮಾಧ್ಯಮಗಳಿಗೆ ತಿಳಿಸಿ, “2023-24ನೇ ಸಾಲಿನ (ದಿನಾಂಕ: 01.04.2023 ರಿಂದ 31.03.2024ರವರೆಗಿನ) 38ನೇ ಸಂಚಿತ ವಾರ್ಷಿಕ ವರದಿಯನ್ನು ಅನುಬಂಧ-1ರಲ್ಲಿ ಇರುವಂತೆ ವಿವರಣಾತ್ಮಕ ಜ್ಞಾಪನದೊಂದಿಗೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವ ಸಲುವಾಗಿ ರಾಜ್ಯಪಾಲರಿಗೆ ಸಲ್ಲಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ” ಎಂದರು.

“ಕರ್ನಾಟಕ ಲೋಕಾಯುಕ್ತ ಅಧಿನಿಯಮ ಕಲಂ 12 (6)ರನ್ವಯ ಮಾನ್ಯ ಲೋಕಾಯುಕ್ತರು ಮಾನ್ಯ ರಾಜ್ಯಪಾಲರಿಗೆ ಸಲ್ಲಿಸುವ ವಾರ್ಷಿಕ ವರದಿಯನ್ನು ಇದೇ ಅಧಿನಿಯಮದ ಕಲಂ 12 (7)ರ ಪ್ರಕಾರ ವಿವರಣಾತ್ಮಕ ಜ್ಞಾಪನಾದೊಂದಿಗೆ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸುವುದು ಕಡ್ಡಾಯವಾಗಿದೆ. ಈ ಪ್ರಕರಣಗಳ ಬಗ್ಗೆ ಆಯಾ ಇಲಾಖೆಗಳ ಸಕ್ಷಮ ಪ್ರಾಧಿಕಾರಗಳು ತ್ವರಿತ ಕ್ರಮಗಳು ತೆಗೆದುಕೊಳ್ಳಬೇಕು ಹಾಗೂ ನಿಗದಿತ ಸಮಯದಲ್ಲಿ ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರಿಗೆ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಒದಗಿಸಲು ನಿರ್ಧರಿಸಲಾಗಿದೆ” ಎಂದರು.

Advertisements

ಪ್ರಮುಖ ನಿರ್ಧಾರಗಳು

2024-25 ಹಾಗೂ 2025-26ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿಗೆ ಅನುಮೋದನೆಯಾಗಿರುವ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಒಟ್ಟಾರೆ ರೂ.37.98 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

ರಾಷ್ಟ್ರೀಯ ಅಭಿಯಾನ ಯೋಜನೆಯಡಿ ಬೆಳಗಾವಿ ಜಿಲ್ಲೆಯ ಅಥಣಿ ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕುಗಳಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ರೂ.13.80 ಕೋಟಿಗಳ ಅಂದಾಜಿನ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ, ಹುನಗುಂದದಲ್ಲಿಯೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲು ನಿರ್ಧಾರ.

ಬಿಯಾಂಡ್ ಬೆಂಗಳೂರು ಕ್ಲಸ್ಟರ್ಸ್ ಸೀಡ್ ಫಂಡ್‌ಗಳನ್ನು (ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ) ವಿಲೀನಗೊಳಿಸಲು ಮತ್ತು ರೂ.75.00 ಕೋಟಿಗಳ ಅಂದಾಜು ವೆಚ್ಚದಲ್ಲಿ ನವೋದ್ಯಮಗಳಿಗಾಗಿ ಒಂದು ಸಂಯೋಜಿತ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಸೀಡ್ ಫಂಡ್ ಅನ್ನು ಸ್ಥಾಪನೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಮುರಗಮಲ್ಲ ಗ್ರಾಮದಲ್ಲಿರುವ ದರ್ಗಾ ಹಜರತ್ ಫಖೀ-ಷಾ-ವಲಿದರ್ಗಾ (ಅಮ್ಮಜಾನ್-ಬಾವ್‌ಜಾನ್ ದರ್ಗಾ)ದ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ರೂ.31.99 ಕೋಟಿಗಳ ಅಂದಾಜು ಮೊತ್ತದಲ್ಲಿ ಕಾಮಗಾರಿಗಳನ್ನು ಮುಂದಿನ 03 ವರ್ಷಗಳಲ್ಲಿ ಕೈಗೊಳ್ಳಲು (ಮೊದಲ ಎರಡು ವರ್ಷ ತಲಾ ರೂ.10.00 ಕೋಟಿಗಳಲ್ಲಿ ಹಾಗೂ ಮೂರನೇ ವರ್ಷ ರೂ.12.00 ಕೋಟಿಗಳಲ್ಲಿ) ಆಡಳಿತಾತ್ಮಕ ಅನುಮೋದನೆ.

“ಪ್ರಜಾಸೌಧ” ನಿರ್ಮಾಣಕ್ಕೆ ಚಿಂಚೋಳಿ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ ಕಾಮಗಾರಿಗೆ ಈಗಾಗಲೇ 10 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ. ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಗದಗ ಪಟ್ಟಣದ ರಿ.ಸ.ನಂ.4/1ಎ/1ಬಿ&4/1ಎ/1ಸಿ ರಲ್ಲಿ 1 ಎಕರೆ 1 ಗುಂಟೆ 8 ಆಣೆ (45270 ಚದರ ಅಡಿ) ಜಮೀನಿನಲ್ಲಿ “ಪ್ರಜಾಸೌಧ” ಗದಗ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಅವಶ್ಯವಿರುವ ಎಲ್ಲಾ ಕಾಮಗಾರಿಗಳು (Fully furnished) ಒಳಗೊಂಡಂತೆ Type C ಮಾದರಿಯಲ್ಲಿ ರೂ.16.00 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

ಹಾವೇರಿ ಜಿಲ್ಲೆ, ಶಿಗ್ಗಾಂವ್ ತಾಲ್ಲೂಕು ಗುಡ್ಡದಚನ್ನಾಪುರ ಗ್ರಾಮದ ರಿ.ಸ.ನಂ.84 ರಲ್ಲಿ 2-00 ಎಕರೆ “ಗೋಮಾಳ” ಜಮೀನನ್ನು ಹೊರಬೀರಲಿಂಗೇಶ್ವರ ಸೇವಾ ಸಮಿತಿಗೆ ಮಂಜೂರು.

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಭೂದಾಖಲೆಗಳ ಆಧುನೀಕರಣ ಕಾರ್ಯಕ್ರಮದಡಿಯಲ್ಲಿ (DILRMP) ಇಲಾಖೆಯ ಅವಶ್ಯಕತೆಗನುಗುಣವಾಗಿ ಹಂತ ಹಂತವಾಗಿ ಸುಮಾರು ರೂ.175.00 ಕೋಟಿ ಅಂದಾಜು ವೆಚ್ಚದಲ್ಲಿ 5000 GNSS ರೋವರ್‌ಗಳನ್ನು (Recievers + controllers) ಟೆಂಡರ್ ಮೂಲಕ ಖರೀದಿಸಲು ಸಚಿವ ಸಂಪುಟ ಅನುಮೋದನೆ.

ಕರ್ನಾಟಕ ಕೈಗಾರಿಕಾ ನೀತಿ 2025-30ರ ರ‍್ಕಾರಿ ಆದೇಶ ಹೊರಡಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯ.

2024-25ನೇ ಸಾಲಿನಿಂದ ಯೋಜನಾ ವೆಚ್ಚ ರೂ.15.30 ಕೋಟಿಗಳಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ 306 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಪ್ರಾರಂಭಿಸಲು ಅನುಕೂಲವಾಗುವಂತೆ ತರಬೇತಿದಾರರನ್ನು ನಿಯೋಜಿಸಲು ಸದರಿ ಶಾಲೆಗಳಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರವನ್ನು ಬೋಧಿಸುವ ಶಿಕ್ಷಣ ತರಬೇತುದಾರರನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯಲು ಸಚಿವ ಸಂಪುಟ ನಿರ್ಣಯ.

ಎ.ಪಿ.ಎಮ್.ಸಿ ಕಾಯ್ದೆ ತಿದ್ದುಪಡಿ

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ & ಅಭಿವೃದ್ಧಿ) (ತಿದ್ದುಪಡಿ) ವಿಧೇಯಕ 2025”ಕ್ಕೆ ಅನುಮೋದನೆ ಹಾಗೂ ಇದನ್ನು ವಿಧಾನಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಮಾರಾಟ ಚಟುವಟಿಕೆಗಳ ನಿಯಂತ್ರಣ ಮತ್ತು ಮೇಲ್ವಿಚಾರಣೆ ಮಾರುಕಟ್ಟೆ ಸಮಿತಿಗಳ ಜವಬ್ದಾರಿಯಾಗಿರುತ್ತದೆ. ಪ್ರಸ್ತುತ ಮಾರುಕಟ್ಟೆ ತಿದ್ದುಪಡಿಯು ಮಾರುಕಟ್ಟೆ ಸಮಿತಿಯ ಅಧಿಕಾರದ ವ್ಯಾಪ್ತಿಯನ್ನು ಮಾರುಕಟ್ಟೆ ಕ್ಷೇತ್ರಕ್ಕೆ ವಿಸ್ತರಿಸಿರುವುದರಿಂದ ಮಾನ್ಯ ನ್ಯಾಯಾಲಯದ ನಿರ್ದೇಶನ ಮೇರೆಗೆ ಚಿಲ್ಲರೆ ವಹಿವಾಟಿಗೆ ಸಂಬಂಧಿಸಿದಂತೆ ವರ್ಗೀಕರಣ ಮಾಡುವ ಪ್ರಸ್ತಾವವನ್ನು ಅಂಗೀಕಾರ ಪಡೆಯುವುದು ಅಗತ್ಯವಿದೆ ಎಂದು ಸಚಿವರು ವಿವರಿಸಿದರು.

ಅಧಿಕ ಬಡ್ಡಿ ವಿಧಿಸಿದರೆ 10 ವರ್ಷ ಶಿಕ್ಷೆ

ಕರ್ನಾಟಕ ಅಧಿಕ ಬಡ್ಡಿ ನಿಷೇಧ ಅಧಿನಿಯಮ, 2004ಕ್ಕೆ ತಿದ್ದುಪಡಿ ಮಾಡುವ ಕುರಿತು ಪ್ರಸ್ತಾಪಿತ ತಿದ್ದುಪಡಿ ವಿಧೇಯಕ 2025ಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಿದೆ ಎಂದು ವಿವರಿಸಿದರು. ಸಹಕಾರ ಸಂಘಗಳು, ನಿಬಂಧಕರು ಈಗಾಗಲೇ ಅಸ್ತಿತ್ವದಲ್ಲಿರುವ ಕರ್ನಾಟಕ ಅಧಿಕ ಬಡ್ಡಿ ನಿಷೇಧ ಕಾಯ್ದೆಯನ್ನು ಅಪರಾಧಿಗಳಿಗೆ 10 ವರ್ಷ ಶಿಕ್ಷೆ ಮತ್ತು 5 ವರ್ಷ ದಂಡ ವಿಧಿಸುವ ಮೂಲಕ ಮತ್ತಷ್ಟು ಬಿಗಿಗೊಳಿಸಲು ತಿದ್ದುಪಡಿ ಪ್ರಸ್ತಾಪಿಸಿದೆ.

ಗಿರವಿ ಉಲ್ಲಂಘನೆಗೆ ಕಠಿಣ ಶಿಕ್ಷೆ

ಕರ್ನಾಟಕ ಗಿರಿವಿದಾರರ ಅಧಿನಿಯಮ, 1961ಕ್ಕೆ ತಿದ್ದುಪಡಿ ಮಾಡುವ ಕುರಿತು ಪ್ರಸ್ತಾಪಿತ ತಿದ್ದುಪಡಿ ವಿಧೇಯಕ 2025ಕ್ಕೆ ಸಚಿವ ಸಂಪುಟದ ಅನುಮೋದನೆ.

ಕನ್ನಡ ಕಡ್ಡಾಯವಿಲ್ಲ

ಕನ್ನಡ ಮಾಧ್ಯಮ ಮತ್ತು ಕನ್ನಡ ಪರೀಕ್ಷೆ ಪಾಸಾದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯವಿಲ್ಲ.
ಕೆಲವೊಂದು ಅರ್ಹ ಅಭ್ಯರ್ಥಿಗಳಿಗೆ ಅಂದರೆ ತತ್ಸಮಾನ ಎಸ್.ಎಸ್.ಎಲ್.ಸಿ ಮತ್ತು ಅದರ ತತ್ಸಮಾನ ವಿದ್ಯಾರ್ಥಿಗಳ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸಿಸಿರುವ ಮತ್ತು ಸದರಿ ವಿದ್ಯಾಬ್ಯಾಸವನ್ನು ಕನ್ನಡ ಮಾಧ್ಯಮದಲ್ಲಿ ಮಾಡಿರುವ ಮತ್ತು ಈ ಹಿಂದೆ ಕರ್ನಾಟಕ ಲೋಕಸೇವಾ ಆಯೋಗ ಮತ್ತು ಇತರ ಆಯ್ಕೆ ಪ್ರಾಧಿಕಾರಗಳು ನಡೆಸಿರುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯಥಿಗಳಿಗೆ ಸದರಿ ಪರೀಕ್ಷೆಯಿಂದ ವಿನಾಯಿತಿ ನೀಡಲು ಪ್ರಸ್ತಾಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X