ಮಂಡ್ಯ | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ; ಕಾರ್ಮಿಕರಿಗೆ ಗಂಭೀರ ಗಾಯ

Date:

Advertisements

ಗಾರ್ಮೆಂಟ್ಸ್‌ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಪೋಟಗೊಂಡಿದ್ದು, ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಲಾಗಿದೆ.

ಗುರುವಾರ ಸ್ಪೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಾಯಗಳಾಗಿವೆ. ಅವರಲ್ಲಿ ಇಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಆದರೆ, ಓರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕಾರ್ಖಾನೆಯ ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್)ನಿಂದ ಕೆಮಿಕಲ್ ಸ್ಪೋಟಗೊಂಡಿದೆ. ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

Advertisements

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ಆದರೆ, ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯದೆ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯ ಧೋರಣೆ ಪ್ರದರ್ಶಿಸಿದೆ. ಘಟನೆ ನಡೆದು ಬಹಳ ಸಮಯವಾದ ಬಳಿಕ, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲದೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ವಾಪಸ್‌ ಕಾರ್ಖಾನೆಗೆ ಕರೆತಂದಿದ್ದಾರೆ. ಆ್ಯಂಬುಲೆನ್ಸ್‌ನಲ್ಲಿಯೇ ಗಂಟೆಗಟ್ಟಲೆ ಇರಿಸಿದ್ದು, ಆ ನಂತರ ಮನೆಗೆ ಬಿಟ್ಟುಬಂದಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಅವರ ಕುಟುಂಬಸ್ಥರು ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಕಾರ್ಖಾನೆಯಲ್ಲೇ ಮತ್ತೊಂದು ಘಟನೆ

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಈ ವರದಿ ಓದಿದ್ದೀರಾ?: ಗುತ್ತಿಗೆ ನೌಕರರಿಗೆ ಅಪಮಾನ; ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹ

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X