ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕವು ನಿರೀಕ್ಷೆಯಷ್ಟು ಅಭಿವೃದ್ಧಿ ಆಗಿಲ್ಲ. ಡಿ.ಎಂ. ನಂಜುಂಡಪ್ಪ ಸಮಿತಿ ವರದಿ ಯಾವ ರೀತಿ ಅನುಷ್ಠಾನವಾಗಿದೆ ಎಂಬುದನ್ನು ಅಧ್ಯಯನ ನಡೆಸಿ, ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೆಪ್ಟೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು’ ಎಂದು ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಅಧ್ಯಕ್ಷ ಪ್ರೊ.ಎಂ.ಗೋವಿಂದರಾವ್ ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರೋ.ಎಂ.ಗೋವಿಂದರಾವ್ ನಾಲ್ಕು ಜಿಲ್ಲೆಗಳಲ್ಲಿನ ತಲಾ ಆದಾಯ, ರಾಜ್ಯದ ಒಟ್ಟಾರೆ ತಲಾ ಆದಾಯಕ್ಕಿಂತ ಹೆಚ್ಚಿದೆ. ಬೆಂಗಳೂರಿನ ತಲಾ ಆದಾಯವೂ ಹೆಚ್ಚಿದೆ. ಉಳಿದ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ’ ಎಂದು ತಿಳಿಸಿದರು.