ಮರಾಠಿ ಭಾಷೆ ಬರಲ್ಲ ಎಂದಿದ್ದಕ್ಕೆ ಬೆಳಗಾವಿ ನಗರದ ಸಿಬಿಟಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ 25 ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿರುವ ಘಟನೆ ನಡೆದಿದೆ
ಬೆಳಗಾವಿ ಸಿಬಿಟಿ ನಿಲ್ದಾಣದಿಂದ ಹೊರಟ್ಟಿದ್ದ ಬಸ್ ನಲ್ಲಿ ಪ್ರಯಾಣಿಕರು ಮತ್ತು ನಿರ್ವಾಹಕನ ಮದ್ಯೆ ಮಾತಿನ ಚಕಮಕಿ ನಡೆದಿದ್ದು ಈ ಸಂದರ್ಭದಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡು ಎಂದು 25 ಕ್ಕೂ ಹೆಚ್ಚು ಜನರು ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ. ಬಸ್ ನಿರ್ವಾಹಕ ಮಹಾದೇವ ಹುಕ್ಕೆರಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಮಾರಿಹಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಡಿಸಿಪಿ ರೋಹನ್ ಜಗದೀಶ ಮಾಧ್ಯಮದವರ ಜೊತೆ ಮಾತನಾಡಿ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಕನ್ನಡಪರ ಹೋರಾಟಗಾರರು ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಧಾವಿಸಿದ್ದು ಕನ್ನಡ ವಿರೋಧಿಗಳು ಕನ್ನಡ ನೆಲದಲ್ಲಿ ಮರಾಠಿ ಮಾತನಾಡದ ಕಾರಣ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇವೆ ಆರೋಪಿಗಳನ್ನು ಕೂಡಲೆ ಬಂಧಿಸಿದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.