ಮಹಿಳೆಯರ ಯೋಜನೆಯನ್ನು ಮೊಟ್ಟಮೊದಲಿಗೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಹೇಳಿದರು.
ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
“ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಸಿದ್ಧರಾಮಯ್ಯನವರು ಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದ ಸಮರ್ಥ ಮುಖ್ಯಮಂತ್ರಿಗಳಾಗಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ
ಸಚಿವ ಸಂಪುಟದಲ್ಲಿ ಐದಾರು ತಾಸುಗಳ ಸಮಯ ಚರ್ಚೆ ಆಗಿದೆ. ಹಾಗಾಗಿ ತಾಯಂದಿರ ಮೂಲಕವೇ ವಿನೂತನ ಯೋಜನೆಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಗದಗ | ಅಧಿಕಾರಿಗಳು ಜನಪರ ಆಡಳಿತಕ್ಕೆ ಅಧಿಕಾರಿಗಳು ಶ್ರಮಿಸಬೇಕು: ಸಚಿವ ಎಚ್ ಕೆ ಪಾಟೀಲ್
“ಮೊಟ್ಟ ಮೊದಲ ಯೋಜನೆಗೆ ಶಕ್ತಿ ಎಂದು ಹೆಸರಿಟ್ಟಿರುವುದು ಅರ್ಥಪೂರ್ಣವಾಗಿದ್ದು, ಚುನಾವಣಾ ಪೂರ್ವದಲ್ಲಿ ಮಾತುಕೊಟ್ಟಂತೆ ನಾವು ನಡೆದುಕೊಂಡಿದ್ದೇವೆ. ಮಹಿಳೆಯರಿಗೆ ಶಕ್ತಿ ಕಾರ್ಡ್ ಕೊಡುವ ಪ್ರಕ್ರಿಯೆಯನ್ನು ಬೇಗನೇ ಪೂರ್ಣಗೊಳಿಸುತ್ತೇವೆ. ಜುಲೈ 1ರಿಂದ ಅನ್ನಭಾಗ್ಯ ಜಾರಿಯಾಗಲಿದೆ” ಎಂದು ತಿಳಿಸಿದರು.
ಗ್ರಾಮದ ಮುಖಂಡರುಗಳಾದ ಮಲ್ಲಣ್ಣ ಗೌಡರು, ಶಾಮರಾವ ಪಾಟೀಲ, ಶಿವಲಿಂಗ ಶರಣರು, ಶ್ರೀಕಾಂತ್ ಉಳ್ಳಿ, ಭೀಮಬಾಯಿ, ಕಾಂತಬಾಯಿ, ಲಕ್ಷ್ಮಣ ಪೂಜಾರಿ, ರಾಚಯ್ಯ ಸ್ವಾಮಿ ಸೇರಿದಂತೆ ಗ್ರಾಮಸ್ಥರು ಇದ್ದರು.