ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆಸಿದೆ. ಕಂಡಕ್ಟರ್ ಮಹದೇವ ಅವರ ಮೇಲೆ ಮರಾಠಿ ಯುವಕರು ಹಲ್ಲೆ ನಡೆಸಿದ್ದಾರೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮರಾಠಿ ಯುವತಿ ಕಂಡಕ್ಟರ್ ಮಹದೇವ್ ಅವರಿಗೆ ಟಿಕೆಟ್ ಕೊಡಿಯೆಂದು ಮರಾಠಿಯಲ್ಲಿ ಕೇಳಿದ್ದಾರೆ. ಕಂಡಕ್ಟರ್ ಮಹಾದೇವ ಅವರು ನನಗೆ ಮರಾಠಿ ಬರುವುದಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ.
ಅವರು ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಯುವತಿಯ ಜೊತೆ ಪ್ರಯಾಣಿಸುತ್ತಿದ್ದ ಯುವಕರು ಮಹದೇವ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಹಲ್ಲೆಗೊಳಗಾದ ಮಹದೇವ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀರು ತನಿಖೆ ನಡೆಸುತ್ತಿದ್ದಾರೆ.