ಗೃಹ ಲಕ್ಷ್ಮಿಯೋಜನೆಯ ಫಲಾನುಭವಿಗಳಿಗೆ ಹಣ ನೀಡುವುದು ಒಂದೆರಡು ತಿಂಗಳು ವಿಳಂಬವಾಗಿರಬಹುದು. ಮುಂಬರುವ ದಿನಗಳಲ್ಲಿ ಅದನ್ನೆಲ್ಲ ಒಟ್ಟಿಗೆ ಸೇರಿಸಿ ಹಣ ಹಾಕಲಾಗುತ್ತದೆ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸರ್ಕಾರದ ಮಟ್ಟದಲ್ಲಿ ಹಣ ನೀಡುವುದು ವಿಳಂಬವಾಗಿರುವುದು ನಿಜ. ಹಾಗಂತ ವಿಳಂಬವಾದರೂ ಹಣ ಕೊಡುವುದನ್ನು ನಿಲ್ಲಿಸಿಲ್ಲ” ಎಂದರು.
“ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸುವ ಅಧಿಕಾರ ನಮಗಿಲ್ಲ, ಅದನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಕ್ಷಣ ಆಗದೆ ಇರಬಹುದು, ಮುಂದೆ ಆಗಬಹುದು. ಯಾವಾಗ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕು” ಎಂದು ಹೇಳಿದರು.
“ಮುಖ್ಯಮಂತ್ರಿ ರೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಮೊದಲಿನಿಂದಲೂ ಇದ್ದಾರೆ. ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿ ಅಲ್ಲ. ಸಮಯ ಬಂದಾಗ ಮುಂದಿನ ತೀರ್ಮಾನ ಹೇಳುತ್ತೇನೆ” ಎಂದು ಹೇಳಿದರು.
“ಸಿದ್ದರಾಮಯ್ಯ ವಿಚಾರಕ್ಕಾಗಿ ಮುಡಾ ಪ್ರಕರಣದಲ್ಲಿ ರಾಜಕೀಯ ಇದೆ. 2,000 ಸೈಟ್‌ಗಳು ಹಂಚಿಕೆ ಆಗಿವೆ. ಆ ಬಗ್ಗೆ ಯಾಕೆ ಚರ್ಚೆ ಯಾಕಿಲ್ಲ? ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಂಸ್ಥೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಹೇಳಲು ಸಾಧ್ಯವಿಲ್ಲ. ಅದನ್ನು ಸಾಬೀತುಪಡಿಸಲು ಆಗಲ್ಲ. ಸಾಕ್ಷಾಧಾರಗಳೂ ಇಲ್ಲ” ಎಂದರು.
ನಿಮ್ಮೊಳಗಿನ ಕಚ್ಚಾಟ ನಿಲ್ಲಿಸಿ. ಅಭಿವೃದ್ಧಿಯ ಕಡೆ ಗಮನ ಹರಿಸಿ.
ಅದಲ್ಲದೇ ಎಲ್ಲಾ ವಿಭಾಗದಲ್ಲೂ ಬೆಲೆ ಏರಿಸುತ್ತಾ ಹೋಗುತ್ತಿದ್ದೀರಿ. ಅದನ್ನು ನಿಲ್ಲಿಸಿ.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ.
ನಿಮಗೆ ಸಿಗುತ್ತಿರುವ ಸವಲತ್ತುಗಳನ್ನು ಬಿಟ್ಟು ಬಿಡಿ.