ಬೆಳಗಾವಿ | ಹಲ್ಲೆಗೊಳಗಾಗಿದ್ದ ಬಸ್ ಕಂಡಕ್ಟರ್ ಮೇಲೆ ಪೋಕ್ಸೋ ಕೇಸ್ ದಾಖಲು

Date:

Advertisements

ಮರಾಠಿ ಬರಲ್ಲ ಎಂದಿದ್ದಕ್ಕೆ ಹಲ್ಲೆಗೊಳಗಾಗಿದ್ದ ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಹಲ್ಲೆಗೊಳಗಾದ ನಿರ್ವಾಹಕ ಮಹಾದೇವಪ್ಪ ಹುಕ್ಕೇರಿ ವಿರುದ್ಧ ಮಾರಿಹಾಳ ಪೊಲೀಸ್​​ ಠಾಣೆಯಲ್ಲಿ ಪೋಕ್ಸೋ ಕೇಸ್​ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, “ಕಂಡಕ್ಟರ್ ಮಹಾದೇವ ಅವರು ಬಸ್‌ನಲ್ಲಿ ಬಾಲಕಿಯೊಬ್ಬಳನ್ನು ಕೆಟ್ಟ ದೃಷ್ಟಿಯಿಂದ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಶನಿವಾರ ಬೆಳಗ್ಗೆ 2:30ರ ವೇಳೆಗೆ ಬಾಲಕಿಯಿಂದ ದೂರು ದಾಖಲಾಗಿದೆ” ಎಂದರು.

ಪೋಕ್ಸೋ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಡಕ್ಟರ್ ಮಹಾದೇವ್‌, “ನನ್ನ ವಿರುದ್ಧ ದೂರು ನೀಡಿರುವ ಹುಡುಗಿಯಷ್ಟು ಪ್ರಾಯದ ಮಗಳಿದ್ದಾಳೆ. ಪ್ರಕರಣದ ದಿಕ್ಕು ತಪ್ಪಿಸಲು ನನ್ನ ಮೇಲೆ ಸುಳ್ಳು ಕೇಸ್‌ ದಾಖಲಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಪೋಕ್ಸೋ ಬಗ್ಗೆ ಶುಕ್ರವಾರ ಬೆಳಗ್ಗೆಯಿಂದ ರಾತ್ರಿಯವರೆಗೂ ಎಲ್ಲೂ ಪ್ರಸ್ತಾಪವೇ ಆಗಿಲ್ಲ. ಆದರೆ ನಿರ್ವಾಹಕ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ರಾತ್ರೋರಾತ್ರಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ಹಲವು ಅನುಮಾನಗಳನ್ನು ಹುಟ್ಟಿಹಾಕಿದೆ.

ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಫೈನಾನ್ಸ್ ಸಾಲಬಾಧೆಯಿಂದ ಕಾರ್ಮಿಕ ಸಾವು

ಇನ್ನು ಕರ್ನಾಟಕದಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿ ಭಾಷಿಕರು ನಿರ್ವಾಹಕರ ಹಲ್ಲೆ ಮಾಡಿದ ಕೃತ್ಯವನ್ನು ಕನ್ನಡಪರ ಸಂಘಟನೆಗಳು ಖಂಡಿಸಿವೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ

ಇಂದು ಬೆಳಗಾವಿ ಜಿಲ್ಲೆಯಾದ್ಯಂತ ಮೋಡ ಆವರಿಸಿಕೊಂಡಿದ್ದು, ಹವಾಮಾನ ಇಲಾಖೆ ಮಧ್ಯಮ ಮಳೆಯ...

ಬೆಳಗಾವಿ : ಮನೆ ಚಾವಣಿ ಕುಸಿದು ಬಿದ್ದು ವ್ಯಕ್ತಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನಿಂಗಾಪೂರ ಪೇಟೆಯಲ್ಲಿ ಬುಧವಾರ ನಸುಕಿನಲ್ಲಿ, ಮಳೆಯಿಂದಾಗಿ...

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

Download Eedina App Android / iOS

X