ನಾವೆಲ್ಲರೂ ಮನುಷ್ಯರು, ಮನುಷ್ಯರಿಗಾಗಿ ಇರುವ ಹಕ್ಕುಗಳು ನಮಗೂ ದೊರಕಬೇಕು. ಅವುಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತ ಮತ್ತು ಸಂವಿಧಾನದ ಅಡಿಯಲ್ಲಿ ಹೆಜ್ಜೆ ಹಾಕೋಣ ಎಂದು ಸಂಜೀವಿನಿ ಸಂಸ್ಥೆಯ ಅದ್ಯಕ್ಷೆ ಸಾಮಾಜಿಕ ಹೋರಾಟಗಾರ್ತಿ ಅಕ್ಷತಾ ಕೆ.ಸಿ ಕರೆಕೊಟ್ಟರು.
ಹಾವೇರಿ ಜಿಲ್ಲೆಯ ಸಂಜೀವಿನಿ ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಸಂಸ್ಥೆ ಹಾಗೂ ರೋಶನಿ ಸಂಸ್ಥೆ ಹಾನಗಲ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ “ಲೈಂಗಿಕ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಬದುಕು ಬವಣೆ ಸಮಾಜ” ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಮೂಲಕ ಅವರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ ಸಮಸಮಾಜವನ್ನು ನಿರ್ಮಾಣ ಮಾಡುವುದೇ ನಮ್ಮ ಗುರಿ” ಎಂದು ರೋಶನಿ ಸಂಸ್ಥೆಯ ಸಿಸ್ಟರ್ ಡಿಸೋಜಾ ಅವರು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಬಾಲಕಾರ್ಮಿಕರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸಬೇಕು: ಸತ್ರ ನ್ಯಾಯಾಧೀಶ ಬಸವಾರಾಜ
“ಸಂಜೀವಿನಿ ಮತ್ತು ರೋಶನಿ ಎರಡೂ ಸಂಸ್ಥೆಗಳು ಸೇರಿ ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಹಾಗೂ ಅವರ ಆರೋಗ್ಯದ ಬಗ್ಗೆ ಕೆಲಸ ಮಾಡಲಿವೆ. ಲಿಂಗತ್ವ ಅಲ್ಪಸಂಖ್ಯಾತರು ಮುಜುಗರ ಬಿಟ್ಟು ತಮ್ಮ ಹಕ್ಕುಗಳತ್ತ ಗಮನ ಹರಿಸಬೇಕು” ಎಂದರು.