‘ಬ್ರ್ಯಾಂಡ್ ಬೆಂಗಳೂರು’ ಮಾಡಲಾಗದವರು ‘ಗ್ರೇಟರ್ ಬೆಂಗಳೂರು’ ಮಾಡುತ್ತಾರಾ: ಛಲವಾದಿ ಪ್ರಶ್ನೆ

Date:

Advertisements

ಬಿಬಿಎಂಪಿಗೆ ಚುನಾವಣೆ ಮುಂದೂಡುತ್ತ ಹೋಗುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಚ್ಯುತಿ ಬರುವ ಕೆಲಸ.
ಬೆಂಗಳೂರನ್ನು ಏಳು ಭಾಗ ಮಾಡುವುದು ಸರಿಯಾದ ಕ್ರಮ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಛಿದ್ರಗೊಳಿಸಲು ನೀವು ಹೊರಟಿದ್ದೀರಿ. ಇದು ಬೆಂಗಳೂರನ್ನು ಒಗ್ಗಟ್ಟಾಗಿ ಇಟ್ಟು ಉತ್ತಮವಾಗಿ ಬೆಳೆಸಬೇಕೆಂಬ ನೀತಿಯಲ್ಲ. ಬ್ರ್ಯಾಂಡ್ ಬೆಂಗಳೂರು ಎನ್ನುತ್ತಿದ್ದವರು ಈಗ ಗ್ರೇಟರ್ ಬೆಂಗಳೂರಿಗೆ ಯಾಕೆ ಹೋದರು? ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು ಯಾವ ಗ್ರೇಟರ್ ಬೆಂಗಳೂರು ಮಾಡುತ್ತಾರ” ಎಂದು ಪ್ರಶ್ನಿಸಿದರು.

“ಈಗಾಗಲೇ ಬೆಂಗಳೂರು ಹಾಳಾಗೋಗಿದೆ. ಎಲ್ಲಿ ಬಾಂಬ್ ಹಾಕಬೇಕೋ, ಎಲ್ಲಿ ಏನೇನು ಮಾಡಬೇಕೋ ಅದನ್ನೆಲ್ಲ ಮಾಡುತ್ತಿದ್ದಾರೆ. ಅಂಥವುಗಳನ್ನು ತಡೆದು ಬೆಂಗಳೂರನ್ನು ಇನ್ನಷ್ಟು ಸುಭದ್ರಗೊಳಿಸಬೇಕಿದೆ. ಇದೆಲ್ಲ ಬಿಟ್ಟು ಆರು ಭಾಗ, ಏಳು ಭಾಗ ಮಾಡಿ ಮೇಯರ್ ಹುದ್ದೆ ಸೃಷ್ಟಿ ಮಾಡಲು ಹೊರಟಿದ್ದೀರಿ. ಮೇಯುವವರಿಗೆ ಅವಕಾಶ ಸಿಗುತ್ತದೆಯೇ ಹೊರತು ಬೆಂಗಳೂರನ್ನು ಕಟ್ಟುವವರಿಗೆ ಅವಕಾಶ ಕೊಡಬೇಕಲ್ಲವೇ? ಸರಕಾರ ಅದರಲ್ಲಿ ಎಡವಿದೆ” ಎಂದು ಆರೋಪಿಸಿದರು.

Advertisements

“ದೇವರು ಬಂದರೂ ಬೆಂಗಳೂರನ್ನು ಕಾಪಾಡಲಾಗದು ಎಂದರೆ ನಿಮ್ಮ ಕೆಲಸ ಏನು? ರಾಜೀನಾಮೆ ಕೊಟ್ಟು ತೊಲಗಿ, ಬಂದವರು ಯಾರೋ ಆಡಳಿತ ಮಾಡುತ್ತಾರೆ. ನಿಮಗಿಂತ ಚೆನ್ನಾಗಿ ನಾವು ಬೆಂಗಳೂರು ಕಟ್ಟಬಲ್ಲೆವು. ಕೈಲಾಗದವರು ಮೈ ಪರಚಿಕೊಂಡರಂತೆ; ಹಾಗೆ ಮಾಡುತ್ತೇವೆ, ಹೀಗೆ ಮಾಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಇನ್ನೂ ಗ್ಯಾರಂಟಿಗಳಿಂದ ಹೊರಬಂದಿಲ್ಲ” ಎಂದರು.

“ಕನ್ನಡದ ಜನರ ಮೇಲೆ ಇವತ್ತು ಗಡಿಭಾಗದಲ್ಲಿ ದಾಳಿ ನಡೆದಿದೆ. ಪುಂಡಾಟಿಕೆ ನಡೆಯುತ್ತಿದೆ. ನಿಮ್ಮ ಆಡಳಿತ ವ್ಯವಸ್ಥೆ ಕುಸಿದುಬಿದ್ದಿದೆ. ಕಾನೂನು- ಸುವ್ಯವಸ್ಥೆ ಕಾಪಾಡಲು ನಿಮ್ಮಿಂದ ಆಗುತ್ತಿಲ್ಲ. ಒಂದೆಡೆ ಪೊಲೀಸ್ ಠಾಣೆಗಳ ಮೇಲೆ ಕಲ್ಲು ತೂರಾಟ, ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ನನ್ನ ಬ್ರದರ್ ಎಂದು ಸರ್ಟಿಫಿಕೇಟ್ ಕೊಡುತ್ತೀರಲ್ಲವೇ? ಈಗ ನಿಮ್ಮ ಬ್ರದರ್‌ಗಳಿಗೆ ಬುದ್ಧಿ ಹೇಳಿ” ಎಂದು ಆಗ್ರಹಿಸಿದರು.

“ಮುಖ್ಯಮಂತ್ರಿಗಳು ಮುಡಾ ಮೂಡಿನಲ್ಲೇ ಇದ್ದಾರೆ. ಅವರ ಮೂಡ್ ಇನ್ನೂ ಬದಲಾಗಿಲ್ಲ. ಮುಡಾ ಅವರನ್ನು ಕಾಡುತ್ತಿದೆ. ಮುಡಾ ಇಲ್ಲಿಗೇ ನಿಲ್ಲುವಂಥದ್ದಲ್ಲ. ನೀವು ಯಾರಿಂದ ಏನು ಬೇಕಾದರೂ ಸರ್ಟಿಫಿಕೇಟ್ ತೆಗೆದುಕೊಳ್ಳಿ. ಈ ದೇಶದ ಕಾನೂನು ಸತ್ತಿಲ್ಲ. ಕೋರ್ಟ್‍ಗಳು ಉತ್ತಮವಾಗಿಯೇ ನಡೆಯುತ್ತಿದ್ದು, ನ್ಯಾಯ ಕೊಡುವ ಕೆಲಸ ಮಾಡಿಯೇ ಮಾಡುತ್ತವೆ. ಮುಡಾ ವಿಚಾರದಲ್ಲಿ ನೀವು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದಲಿತ ಮುಖವಾಡ ಹಾಕಿಕೊಂಡ ಮನುವ್ಯಾದಿ ಚೌಕಿದಾರ,, ಸ್ಮಾರ್ಟ್ ಸಿಟಿ ಗಂಟೆ ಬಾರಿಸಿಕೊಂಡು ದೇಶವೆಲ್ಲಾ ಓಡಾಡಿದಿರಿ ಹತ್ತು ವರ್ಷಗಳಲ್ಲಿ ಅದೆಷ್ಟು ಸ್ಮಾರ್ಟ್ ಮಾಡಿದಿರಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X