‘ಲಿವ್-ಇನ್ ಸಂಬಂಧ’ವನ್ನು ಮದುವೆ ಎಂದು ಕಾನೂನು ಪರಿಗಣಿಸುವುದಿಲ್ಲ: ಕೇರಳ ಹೈಕೋರ್ಟ್‌

Date:

Advertisements

‘ಲಿವ್-ಇನ್ ರಿಲೇಷನ್‌ಶಿಪ್‌’ಅನ್ನು ಕಾನೂನಿನ ಅಡಿಯಲ್ಲಿ ಮದುವೆಯೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್‌ ಮಂಗಳವಾರ ಅಭಿಪ್ರಾಯಪಟ್ಟಿದೆ.

ಇಬ್ಬರು ವ್ಯಕ್ತಿಗಳು ಕಾನೂನು ಅಥವಾ ವಿಶೇಷ ವಿವಾಹ ಕಾಯಿದೆ ಅಡಿಯಲ್ಲಿ ಮದುವೆಯಾಗದೆ, ಕೇವಲ ಪರಸ್ಪರ ಒಪ್ಪಿಗೆಯ ಆಧಾರದ ಮೇಲೆ ಒಟ್ಟಿಗೆ ವಾಸಿಸಲು ನಿರ್ಧಿಸಿದ್ದರೆ, ಅದನ್ನು ವಿವಾಹವೆಂದು ಪರಿಗಣಿಸಲು ಆಗುವುದಿಲ್ಲ. ಅಲ್ಲದೆ, ಅವರು ವಿಚ್ಛೇದನ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ‘ಬಾರ್ ಮತ್ತು ಬೆಂಚ್‘ ವರದಿ ಮಾಡಿದೆ.

ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಸಂಗಾತಿಗಳು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ತಿರಸ್ಕರಿಸಿತ್ತು. ವಿಶೇಷ ವಿವಾಹ ಕಾಯ್ದೆಯಡಿ ವಿಚ್ಛೇದನ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಆ ತೀರ್ಪನ್ನು ಪ್ರಶ್ನಿಸಿ ಜೋಡಿಯು ಹೈಕೋರ್ಟ್‌ ಮೆಟ್ಟಿಲೇರಿತ್ತು.

Advertisements

ಅವರ ಅರ್ಜಿಯನ್ನು ಕೇರಳ ಹೈಕೋರ್ಟ್ ನ್ಯಾಯಮೂರ್ತಿ ಎ ಮುಹಮ್ಮದ್ ಮುಸ್ತಾಕ್ ಮತ್ತು ಸೋಫಿ ಥಾಮಸ್ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು, ‘ಲಿವ್-ಇನ್ ಸಂಬಂಧ’ಗಳ ಬಗ್ಗೆ ಗಮನಿಸಿದೆ. “ಈ ಸಂಬಂಧವು ಇನ್ನೂ ಕಾನೂನುಬದ್ಧವಾಗಿ ಗುರುತಿಸಲ್ಪಟ್ಟಿಲ್ಲ. ವೈಯಕ್ತಿಕ ಕಾನೂನು ಅಥವಾ ವಿಶೇಷ ವಿವಾಹ ಕಾಯ್ದೆಯ ಅನುಸಾರವಾಗಿ ವಿವಾಹ ನಡೆಸಿದರೆ ಮಾತ್ರ ಆ ಸಂಬಂಧವನ್ನು ಕಾನೂನಿನ ಮೂಲಕ ಮಾನ್ಯೀಕರಿಸಲಾಗುತ್ತದೆ” ಎಂದು ಪೀಠವು ಹೇಳಿದೆ.

“ಮದುವೆಯು ಸಾಮಾಜಿಕ ಪ್ರಕ್ರಿಯೆಯಾಗಿದ್ದು, ಕಾನೂನಿನಿಂದ ಗುರುತಿಸಲ್ಪಟ್ಟಿದೆ. ಅದು ಸಮಾಜದಲ್ಲಿನ ಸಾಮಾಜಿಕ ಮತ್ತು ನೈತಿಕ ಆದರ್ಶಗಳನ್ನು ಪ್ರತಿಬಿಂಬಿಸುತ್ತದೆ. ವಿಚ್ಛೇದನವು ಕಾನೂನುಬದ್ಧ ವಿವಾಹ ಸಂಬಂಧವನ್ನು ಬೇರ್ಪಡಿಸುವ ಸಾಧನವಾಗಿದೆ. ‘ಲಿವ್-ಇನ್ ಸಂಬಂಧ’ಗಳನ್ನು ಇತರ ಉದ್ದೇಶಗಳಿಗಾಗಿ ಗುರುತಿಸಬಹುದು. ಆದರೆ, ವಿಚ್ಛೇದನಕ್ಕಾಗಿ ಪರಿಗಣಿಸಲು ಸಾಧ್ಯವಿಲ್ಲ. ಮಾನ್ಯತೆ ಪಡೆದ ವಿವಾಹದ ಪ್ರಕಾರ ವಿವಾಹವಾದರೆ ಮಾತ್ರ ವಿಚ್ಛೇದನಕ್ಕೆ ಅವಕಾಶ ನೀಡಬಹುದು” ಎಂದು ಪೀಠವು ಹೇಳಿದೆ.

ಈ ಸುದ್ದಿ ಓದಿದ್ದೀರಾ?: ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಹೈಕೋರ್ಟ್‌ ಮೆಟ್ಟಿಲೇರಿದ್ದ ಅರ್ಜಿದಾರ ಹಿಂದು ಮತ್ತು ಕ್ರಿಶ್ಚಿಯನ್ ಸಂಗಾತಿಗಳು 2006ರಲ್ಲಿ ‘ಲಿವ್-ಇನ್ ರಿಲೇಷನ್‌ಶಿಪ್‌’ನಲ್ಲಿ ವಾಸಿಸಲು ನಿರ್ಧಿಸಿದ್ದರು. ಅವರಿಬ್ಬರಿಗೆ ಒಂದು ಮಗು ಕೂಡ ಜನಿಸಿತ್ತು. ಆದರೆ, ಈಗ ಅವರು ತಮ್ಮ ಸಂಬಂಧವನ್ನು ಕೊನೆಗೊಳಿಸಲು ನಿರ್ಧಿಸಿದ್ದಾರೆ. ಅದಕ್ಕಾಗಿ, ಕೌಟುಂಬಿಕ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಅವರು ವಿಶೇಷ ವಿವಾಹ ಕಾಯ್ದೆಯಡಿ ವಿವಾಹವಾಗಿಲ್ಲ ಎಂಬ ಕಾರಣಕ್ಕೆ ನ್ಯಾಯಾಲಯ ಅವರಿಗೆ ವಿಚ್ಛೇದನ ನೀಡಲು ನಿರಾಕರಿಸಿದೆ.

ಯಾವುದೇ ಜೋಡಿಯು ವೈಯಕ್ತಿಕ ಕಾನೂನು ಅಥವಾ ವಿಶೇಷ ವಿವಾಹ ಕಾಯಿದೆಯ ಪ್ರಕಾರ ಮದುವೆಯಾಗದೆ, ಪರಸ್ಪರ ಒಪ್ಪಿಗೆ ಮೇರೆಗೆ ಗಂಡ-ಹೆಂಡತಿ ಎಂದು ಘೋಷಿಸಿಕೊಂಡಾಗ, ಅವರು ಅದನ್ನು ಮದುವೆ ಎಂದು ಹೇಳಲು ಅಥವಾ ವಿಚ್ಛೇದನ ಪಡೆಯಲು ಸಾಧ್ಯವಿಲ್ಲ. ಅಂತಹ ವಿಚ್ಛೇದನದ ಹಕ್ಕನ್ನು ಪರಿಗಣಿಸಲು ಕೌಟುಂಬಿಕ ನ್ಯಾಯಾಲಯವು ಅಧಿಕಾರ ವ್ಯಾಪ್ತಿ ಹೊಂದಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X