ಕೊಪ್ಪಳ | ಪದ್ಮಶ್ರೀ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಮನೆಗೆ ಮೇಘಾಲಯ ರಾಜ್ಯಪಾಲ ಭೇಟಿ: ಸನ್ಮಾನ

Date:

Advertisements

2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳೆಕ್ಯಾತರ ಮನೆಗೆ ನಿನ್ನೆ (ಫೆ.22) ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಅವರು ಭೇಟಿ ನೀಡಿ ಪದ್ಮಶ್ರೀ ಪುರಸ್ಕೃತರನ್ನು ಸನ್ಮಾನಿಸಿದರು.

ರಾಮಾಯಣ ಮತ್ತು ಮಹಾಭಾರತದ ಕಥೆಯನ್ನು ಹೇಳುವ ತೊಗಲು ಗೊಂಬೆಯಾಟದ ಕೆಲವು ಹಾಡುಗಳನ್ನು ಭೀಮವ್ವ ಕುಟುಂಬದವರು ರಾಜ್ಯಪಾಲರ ಎದುರು ಹಾಡಿ ಗಮನ ಸೆಳೆದರು. ಬಳಿಕ ಭೀಮವ್ವ ಕುಟುಂಬಸ್ಥರು ಮಾತನಾಡಿ, “ಈ ಕಲೆಯನ್ನು ನಾವು ಸುಮಾರು ನಾಲ್ಕು ತಲೆಮಾರುಗಳಿಂದ ಉಳಿಸಿ ಬೆಳೆಸಿಕೊಂಡು ಬಂದಿದ್ದೇವೆ. ನಮ್ಮ ಕಲೆಗೆ ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಅತೀವ ಸಂತಸ ತಂದಿದೆ. ಈ ಪ್ರಶಸ್ತಿ ನೀಡಿದ ಸರ್ಕಾರಕ್ಕೆ ಧನ್ಯವಾದಗಳು” ಎಂದರು.

WhatsApp Image 2025 02 22 at 7.10.46 PM

ತೊಗಲು ಗೊಂಬೆಯಾಟ ವೀಕ್ಷಿಸಿ ಆಕರ್ಷಿತರಾದ ರಾಜ್ಯಪಾಲು, ಈ ಕಲೆಯ ಪ್ರದರ್ಶನವನ್ನು ಮೇಘಾಲಯದ ರಾಜಭವನದಲ್ಲಿ ವಿಶೇಷ ಕಾರ್ಯಕ್ರಮಗಳ ಸಂದರ್ಭದಲ್ಲಿ ಈ ಕಲಾವಿದರನ್ನು ಆಹ್ವಾನಿಸಿ, ಕಾರ್ಯಕ್ರಮ ಆಯೋಜನೆ ಮಾಡುವಂತೆ ಅವರ ವಿಶೇಷ ಕರ್ತವ್ಯಾಧಿಕಾರಿಗೆ ನಿರ್ದೇಶನ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ?: ಕೊಪ್ಪಳ | ಕಾರ್ಖಾನೆ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ: ಬಸವರಾಜ ರಾಯರಡ್ಡಿ

ಈ ವೇಳೆ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ, ಕೊಪ್ಪಳ ತಹಶೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು‌, ಜನಪ್ರತಿನಿಧಿಗಳು, ಮೋರನಾಳ ಗ್ರಾಮಸ್ಥರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X