ವ್ಹೈಟ್‌ಲಿಫ್ಟಿಂಗ್ ಕ್ರೀಡಾ ಪಟುಗೆ ಸನ್ಮಾನ; 2.50 ಲಕ್ಷ ರೂ. ವೈಯಕ್ತಿಕ ನೆರವು ನೀಡಿದ ಸಚಿವ

Date:

Advertisements

ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯಾ ಗೇಮ್ಸ್‌ನಲ್ಲಿ ವ್ಹೈಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕ ಗೆದ್ದ ಖುಡ್ಸಿಯಾ ನಜೀರ್ ಅವರನ್ನು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಸನ್ಮಾನಿಸಿದ್ದಾರೆ.

ಬೆಂಗಳೂರಿನ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಖುಡ್ಸಿಯಾ ನಜೀರ್ ಅವರನ್ನು ಜಮೀರ್‌ ಅಹಮದ್ ಸನ್ಮಾನಿಸಿದರು. ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಲು ಫಿನ್‌ಲೆಂಡ್‌ಗೆ ತೆರಳುತ್ತಿರುವ ನಜೀರ್‌ ಅವರಿಗೆ ವೈಯಕ್ತಿಕವಾಗಿ 2.50 ಲಕ್ಷ ರೂ. ನೆರವಿನ ಚೆಕ್ ನೀಡಿದರು.

ಅಲ್ಲದೆ, ದೇಶದ ಕೀರ್ತಿ ಹೆಚ್ಚಿಸುತ್ತಿರುವ ಇಂತಹ ಕ್ರೀಡಾಪಟುಗಳಿಗೆ ನೆರವು ನೀಡಲು ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಜಮೀರ್ ಅಹಮದ್ ನಿರ್ದೇಶನ ನೀಡಿದರು.

Advertisements

ಬಂಗಾರಪೇಟೆ ಮೂಲದ ಖುಡ್ಸಿಯಾ ನಜೀರ್, ಕೆಎಸ್‌ಆರ್‌ಟಿಸಿಯಲ್ಲಿ ಪ್ರಥಮ ದರ್ಜೆ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ, ವ್ಹೈಟ್‌ಲಿಫ್ಟಿಂಗ್ ಸ್ಪರ್ಧೆಗೂ ಕೋಚಿಂಗ್‌ ಪಡೆಯುತ್ತಿದ್ದು, ರಾಜ್ಯ, ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರ ವಿಭಾಗದಲ್ಲಿ 87 ಕೆಜಿ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ.

“ಸಚಿವ ಜಮೀರ್ ಅಹಮದ್ ಅವರು ನನ್ನ ಸಾಧನೆ ಗುರುತಿಸಿ ಸನ್ಮಾನಿಸಿದ್ದಾರೆ. ಫಿನ್‌ಲೆಂಡ್‌ಗೆ ತೆರಳಲು 2.50 ಲಕ್ಷ ರೂ. ನೆರವು ನೀಡಿದ್ದಾರೆ. ಇದು ಸಂತಸ ತಂದಿದೆ. ಇದರಿಂದ ಮತ್ತಷ್ಟು ಸಾಧನೆ ಮಾಡಲು ಉತ್ತೇಜನ ಸಿಕ್ಕಿದೆ” ಎಂದು ನಜೀರ್ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X