ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಮಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ಜತ್ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ ಸಮಾರಂಭಕ್ಕೆ ಬಂದಿದ್ದ ರಾಮು ಕರ್ಣಿ ( 28 ) ಜಾಹ್ನವಿ ಕರ್ಣಿ (11) ತಂದೆ ಮಗಳು ಅಪಘಾತದಲ್ಲಿ ಮೃತ ಪಟ್ಟಿದ್ದಾರೆ.
ಅಪಘಾತದಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದು, ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.