ಚಾಂಪಿಯನ್ಸ್‌ ಟ್ರೋಫಿ | ಟಾಸ್‌ ಗೆದ್ದ ಪಾಕ್‌ ಬ್ಯಾಟಿಂಗ್ ಆಯ್ಕೆ; ಸತತ 12ನೇ ಬಾರಿ ಟಾಸ್‌ ಸೋತ ಭಾರತ

Date:

Advertisements

ಚಾಂಪಿಯನ್ಸ್‌ ಟ್ರೋಫಿಯ ಎ ಗುಂಪಿನ ನಡುವೆ ನಡೆಯುತ್ತಿರುವ ಮಹತ್ವದ ಭಾರತ – ಪಾಕ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊಹಮ್ಮದ್ ರಿಜ್ವಾನ್‌ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.

ಸತತ 12ನೇ ಬಾರಿಗೆ ಟಾಸ್‌ ಸೋತ ಭಾರತ ಫೀಲ್ಡಿಂಗ್‌ಗೆ ಇಳಿಯಲು ಮುಂದಾಗಿದೆ. ಭಾರತ ಹಾಗೂ ಪಾಕ್‌ ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಮಿನಿ ವಿಶ್ವಕಪ್‌ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್‌ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೂ ಭಾರತ ಮತ್ತು ಪಾಕಿಸ್ತಾನ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ ತಂಡ 2 ಬಾರಿ ಗೆದ್ದಿದ್ದರೆ, 3 ಬಾರಿ ಪಾಕಿಸ್ತಾನದ್ದೇ ಜಯಗಳಿಸಿದೆ. ಅದರಲ್ಲೂ ಒಂದು ಬಾರಿ ಫೈನಲ್‌ನಲ್ಲೇ ಭಾರತವನ್ನು ಪಾಕ್‌ ತಂಡ ಸೋಲಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

Advertisements

ಒಟ್ಟಾರೆ ಇಲ್ಲಿಯವರೆಗೂ ಎರಡೂ ತಂಡಗಳು ಆಡಿರುವ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಪಂದ್ಯಗಳಲ್ಲಿ ಮಾತ್ರ ಗೆದ್ದರೆ, ಪಾಕಿಸ್ತಾನ 73 ಪಂದ್ಯಗಳಲ್ಲಿ ಭಾರತಕ್ಕೆ ಸೋಲಿನ ರುಚಿ ತೋರಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶ ರಹಿತವಾಗಿತ್ತು.

ಪಂದ್ಯವಾಡುವ ಉಭಯ ತಂಡಗಳು:
ಭಾರತ:
 ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ .

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಆಜಂ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಇಮಾಮ್ ಉಲ್ ಹಕ್.

ಪಂದ್ಯ ಆರಂಭವಾಗುವ ಸಮಯ: ಮಧ್ಯಾಹ್ನ 2.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್​ ಆ್ಯಪ್​ ಹಾಗೂ ವೈಬ್​ಸೈಟ್​ಗಳಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್...

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

Download Eedina App Android / iOS

X