ಕರ್ನಾಟಕದ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ ಹೊಣೆ: ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ

Date:

Advertisements

ʼಮರಾಠಿ ಮಾತನಾಡಲು ಬರಲ್ಲʼವೆಂದು ಹೇಳಿದ್ದಕ್ಕೆ ಬಸ್‌ ಕಂಡಕ್ಟರ್ ಮತ್ತು ಚಾಲಕರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವು‌ದು ಖಂಡನೀಯ. ಕರ್ನಾಟಕದ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ನಾರಾಯಣಗೌಡ್ರೇ ಬೆಳಗಾವಿಗೆ ಬನ್ನಿ, ಬಾಳೆಕುಂದ್ರಿಗೆ ಬನ್ನಿ, ಮರಾಠಿ ಬಾರದ ಕಾರಣಕ್ಕೆ ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮಹದೇವಪ್ಪ ಹುಕ್ಕೇರಿಯವರಿಗೆ ನ್ಯಾಯ ಕೊಡಿಸಿರೆಂದು ನೂರಾರು ಮಂದಿ ಹೇಳುತ್ತಿದ್ದೀರಿ. ಫೋನುಗಳು, ಸಂದೇಶಗಳು, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಪೋಸ್ಟ್‌ಗಳ ಮೂಲಕ ನೀವು ನನ್ನನ್ನು ಕರೆಯುತ್ತಿದ್ದೀರಿ. ದೌರ್ಜನ್ಯಕ್ಕೆ ಒಳಗಾದ ಮಹದೇವಪ್ಪ ಅವರ ಮೇಲೇ ರಾತ್ರೋರಾತ್ರಿ ಒಂದು ಪ್ರಕರಣ ದಾಖಲಿಸಲಾಗಿದೆ. ಅದೂ ಕೂಡ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆಂದು ಆರೋಪಿಸಲಾದ ಸುಳ್ಳು ಪ್ರಕರಣ” ಎಂದು ತಿಳಿಸಿದ್ದಾರೆ.

“ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿಗೆ ಬರಲು ನನಗೆ ಯಾವ ಹಿಂಜರಿಕೆಯು ಇಲ್ಲ. ಆದರೆ, ಗೌಡ್ರೇ ಬೆಳಗಾವಿಗೆ, ಬಾಳೇಕುಂದ್ರಿಗೆ ಬನ್ನಿ ಎಂದು ಕರೆಯುತ್ತಿರುವವರಿಗೆ ನನ್ನ ಒಂದಷ್ಟು ಪ್ರಶ್ನೆಗಳಿವೆ. ಎಲ್ಲಿದ್ದಾರೆ ನಿಮ್ಮ ಜನಪ್ರತಿನಿಧಿಗಳು? ನೀವೇ ಓಟು ಹಾಕಿ ಗೆಲ್ಲಿಸಿದ ಶಾಸಕರೆಲ್ಲ ಎಲ್ಲಿ ಹೋದರು? ನಿಮ್ಮ ಜಿಲ್ಲೆಯನ್ನು ಪ್ರತಿನಿಧಿಸುವ ಮಂತ್ರಿಗಳು ಬಾಯಿ ಹೊಲೆದುಕೊಂಡು ಕುಳಿತಿರುವುದು ಯಾಕೆ? ಎಲ್ಲಿದೆ ಆಡಳಿತ ಪಕ್ಷ? ಎಲ್ಲಿದೆ ವಿರೋಧ ಪಕ್ಷ? ಕನ್ನಡಿಗರ ಪಾಲಿಗೆ ಇವೆಲ್ಲ ಸತ್ತೇ ಹೋಗಿವೆಯೇ? ಒಬ್ಬ ಅಮಾಯಕ ಕನ್ನಡಿಗನ ಮೇಲೆ ಸುಳ್ಳು ಕೇಸು ಹಾಕಿದ್ದಾರಲ್ಲ. ಯಾರ ಚಿತಾವಣೆಯಿಂದ ಇದು ನಡೆದಿದೆ? ಸುಳ್ಳು ದೂರು ದಾಖಲಿಸಿಕೊಳ್ಳಿ‌ ಎಂದು ಪೊಲೀಸರಿಗೆ ತಾಕೀತು ಮಾಡಿದ ಶಕ್ತಿಗಳು ಯಾವುವು? ಮರೆಯಲ್ಲಿ ನಿಂತು ಬಾಣ ಬಿಡುವ ಇವರ ಬಗ್ಗೆ ನಿಮಗೇನಾದರೂ ಗೊತ್ತಿದೆಯೇ” ಎಂದು ಪ್ರಶ್ನಿಸಿದ್ದಾರೆ.

Advertisements

“ಇವತ್ತು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವ ಶಕ್ತಿಗಳ ಬಗ್ಗೆ ನನಗೆ ತುಂಬಾ ಚೆನ್ನಾಗಿ ಗೊತ್ತಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಮಹಾನಗರ ಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಿದಾಗ ಇವರ ಅಪ್ಪಂದಿರ ಮೂತಿಗೆ ಮಸಿ ಬಳಿದಿದವರು ನಾವು. ಇವರ ರಾಜಕಾರಣವನ್ನು ಹಂತ ಹಂತವಾಗಿ ತಿಪ್ಪೆಗೆಸೆದು ವಿಧಾನಸೌಧದ ಬಾಗಿಲು ಮುಚ್ಚಿದವರು ನಾವು. ಈಗ ಅವರು ಹತಾಶರಾಗಿದ್ದಾರೆ, ಅದಕ್ಕಾಗಿ ಈ ಅಮಾಯಕರ ಮೇಲೆ ಹಲ್ಲೆ ನಡೆಸುವ ಹೇಡಿತನ ತೋರುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾವೀಗ ಯಾರ ವಿರುದ್ಧ ಬಡಿದಾಡಬೇಕು ಹೇಳಿ. ನೆರೆಯ ರಾಜ್ಯದ ಚಿತಾವಣೆಯಿಂದ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಇಳಿಯುವ ದುಷ್ಟ ಶಕ್ತಿಗಳ ವಿರುದ್ಧವೇ? ಅಥವಾ ಇದೆಲ್ಲ ನೋಡಿಕೊಂಡು ಮರಾಠಿ ಓಟ್ ಬ್ಯಾಂಕ್ ಕೈತಪ್ಪುತ್ತದೆಯೆಂಬ ಕಾರಣಕ್ಕೆ ಸ್ವಾಭಿಮಾನ ಮರೆತು ಅಡಗಿ ಕುಳಿತಿರುವ ನಮ್ಮ ಹೇಡಿ ರಾಜಕಾರಣಿಗಳ ವಿರುದ್ಧವೇ? ಇವರು ಬಾಯಿಬಿಟ್ಟು ಮಾತಾಡುವಂತೆ ಮಾಡುವುದು ಕೂಡ ನಮ್ಮ ಕರ್ತವ್ಯವಲ್ಲವೇ?” ಎಂದು ನಾರಾಯಣಗೌಡ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮರಾಠಿ ಪುಂಡರನ್ನು ಬಂಧಿಸದಿದ್ದರೆ ಪರಿಣಾಮ ಭೀಕರ: ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

“ನಾನೀಗ ಕೆಪಿಎಸ್‌ಸಿಯಲ್ಲಿ ಲಕ್ಷಾಂತರ ಕನ್ನಡದ ಮಕ್ಕಳಿಗೆ ಆಗಿರುವ ಅನ್ಯಾಯದ ವಿರುದ್ಧ ಬಡಿದಾಡುತ್ತಿದ್ದೇನೆ.‌ ಆ ಮಕ್ಕಳಿಗೆ ನ್ಯಾಯ ಕೊಡಿಸುವುದಕ್ಕಾಗಿ ನಿರ್ಣಾಯಕ ಹೋರಾಟಕ್ಕೆ ಸಜ್ಜಾಗುತ್ತಿದ್ದೇನೆ. ಈ ಸಂಘರ್ಷದ ನಡುವೆಯೂ ನನ್ನ ಹೃದಯ ಏಟು ತಿಂದು, ಕೇಸು ಹಾಕಿಸಿಕೊಂಡ ಆ ಅಮಾಯಕ ಜೀವಕ್ಕಾಗಿ ಮಿಡಿಯುತ್ತಿದೆ. ನಾಡಿದ್ದು ಮಂಗಳವಾರವೇ ನಾನು ಬೆಳಗಾವಿಗೆ ಬರುತ್ತಿದ್ದೇನೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳ ಕರವೇ ಕಾರ್ಯಕರ್ತರು, ಅಕ್ಕ ಪಕ್ಕದ ಜಿಲ್ಲೆಗಳ ಮುಖಂಡರೂ ಅಂದು ಬೆಳಗಾವಿಗೆ ಬರುತ್ತಿದ್ದೇವೆ. ನಾನು ಬರುವಾಗ ಸುಮ್ಮನೇ ಬಂದು ಹೋಗುವುದಿಲ್ಲ. ಇಷ್ಟು ಸೂಕ್ಷ್ಮ ನಮ್ಮ ಪೊಲೀಸ್ ಇಲಾಖೆಗೆ ಗೊತ್ತೇ ಇದೆಯೆಂದು ಭಾವಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಗೃಹ ಸಚಿವರು ಕೂಡಲೇ ಮಧ್ಯೆ ಪ್ರವೇಶಿಸಿ ಮಹದೇವಪ್ಪ ವಿರುದ್ಧದ ಪ್ರಕರಣ ಹಿಂದಕ್ಕೆ ಪಡೆಯಲಿ. ಇದು ನನ್ನ ಆಗ್ರಹ. ಈ ಸಂಘರ್ಷ ಹೀಗೆ ಮುಂದುವರೆಯಲಿ ಎಂಬುದು ಅವರ ಆಸೆಯಾದರೆ ನಾವೇನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X