ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಯವರ ಭರ್ಜರಿ ಶತಕದ ನೆರವಿನಿಂದ ದುಬೈನ ಶಾರ್ಜಾ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ “ಎ” ಗುಂಪಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರು ವಿಕೆಟ್ಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿದೆ. ಆ ಮೂಲಕ ಲೀಗ್ ಹಂತದಲ್ಲಿ ಎರಡನೇ ಜಯ ದಾಖಲಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಪಾಕಿಸ್ತಾನ ತಂಡ, 49.4 ಓವರ್ಗಳಲ್ಲಿ 241 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಬಳಗ, ಕೊಹ್ಲಿಯವರ ಶತಕ, ಶ್ರೇಯಸ್ ಅಯ್ಯರ್ ಅವರ ಅರ್ಧಶತಕದ ನೆರವಿನಿಂದ 42.3 ಓವರ್ಗಳಲ್ಲಿ 4 ವಿಕೆಟ್ಗೆ 244 ರನ್ ಸೇರಿಸಿ ಭರ್ಜರಿ ಜಯ ಸಾಧಿಸಿತು.
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಸೋಲನ್ನು ಕಂಡ ಚಾಂಪಿಯನ್ಸ್ ಟ್ರೋಫಿಯ ಆತಿಥ್ಯವನ್ನು ವಹಿಸಿರುವ ಪಾಕಿಸ್ತಾನ, ಪ್ರಸಕ್ತ ಟೂರ್ನಿಯಲ್ಲಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಗಡೆ ಬೀಳುವುದು ಬಹುತೇಕ ಖಚಿತವಾಗಿದೆ.
