ಸಮಗಾರ ಸಮಾಜ ಹಾಗೂ ಇತರೆ ಸಮಾಜದ ಜನಾಂಗದವರು ವಾಸಿಸುತ್ತಿರುವ ಮನೆಗಳಿಗೆ ಆಶ್ರಯ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾದ ಮುಖಂಡರು ಹಾಗೂ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ ಅವರಿಗೆ ಮನವಿ ಮಾಡಿದರು.
ಸಮಗಾರ ಸಮಾಜದ ಮುಖಂಡ ಹಾಗೂ ಬೀದಿಬದಿ ವ್ಯಾಪಾರಿಗಳು ಅಂಬೇಡ್ಕರ್ ಯುವ ಸೈನ್ಯ ರಾಜ್ಯ ಉಪಾಧ್ಯಕ್ಷ ಪರಶುರಾಮ್ ರಾಯಬಾಗ್ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಚನ್ನವೀರಪ್ಪ ಗಾಮನಗಟ್ಟಿ ಅವರನ್ನು ಭೇಟಿ ಮಾಡಿ ಮಾತನಾಡಿ, “ಆಶ್ರಯ ಮನೆಯ ಹಕ್ಕುಪತ್ರ ಪಡೆಯಲು ನಿರಂತರವಾಗಿ ಹಲವು ವರ್ಷಗಳಿಂದ ಧರಣಿ ಸತ್ಯಾಗ್ರಹ ಮಾಡುತ್ತ ಬಂದಿದ್ದು, ಅಧಿಕಾರಿಗಳೂ ಇದಕ್ಕೆ ಸಕಾರಾತ್ಮಕ ಸ್ಪಂದನೆ ನೀಡುತ್ತಿದ್ದಾರೆ. ಆದರೂ ಈವರೆಗೆ ಹಕ್ಕುಪತ್ರ ನೀಡಿರುವುದಿಲ್ಲ” ಎಂದು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ; ʼಬೆಳಗಾವಿ ಚಲೋʼ ಕೈಬಿಡಬೇಕೆಂದು ಸತೀಶ್ ಜಾರಕಿಹೊಳಿ ಮನವಿ
“ಅಶ್ರಯ ಸಮಿತಿಯ ಸಂಬಂಧಪಟ್ಟ ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳೊಂದಿಗೆ ಇದರ ಬಗ್ಗೆ ಮಾತನಾಡಿ ನಮಗೆ ಹಕ್ಕುಪತ್ರ ನೀಡಬೇಕು” ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭರ್ಮಪ್ಪ ತೋರಗಲ್, ಉಮೇಶ್ ಬಾಬು ಚಿಟ್ಟುಗುಬ್ಬಿ ಸೇರಿದಂತೆ ಇತರರು ಇದ್ದರು.