ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಯುವಕರಿಬ್ಬರ ಕಾಲು ಮುರಿದಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ.
ಸಂಜೆ 5-45ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಬ್ಬರು ಯುವಕರು ಸುಬ್ಬಯ್ಯ ಕಾಲೇಜಿನವರು ಎಂದು ತಿಳಿದುಬಂದಿದೆ. ಸದ್ಯ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ; ʼಬೆಳಗಾವಿ ಚಲೋʼ ಕೈಬಿಡಬೇಕೆಂದು ಸತೀಶ್ ಜಾರಕಿಹೊಳಿ ಮನವಿ
ಪೊಲೀಸ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.