ಕೋಚಿಂಗ್ ಸೆಂಟರ್‌ಗಳ ಸೇವಾ ನ್ಯೂನತೆ; ಬಿಸಿ ಮುಟ್ಟಿಸಿದ NCH

Date:

Advertisements

ಕೋಚಿಂಗ್ ಸೆಂಟರ್ ತೆರೆದು ಅಭ್ಯರ್ಥಿಗಳಿಗೆ ಸರಿಯಾಗಿ ಸ್ಪಂದಿಸದೆ ಇರುವಂಥ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಬಿಸಿ ಮುಟ್ಟಿಸಿದೆ. ವಂಚನೆಗೆ ಒಳಗಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೊರೆ ಹೋದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿದೆ.

ಇತ್ತೀಚಿನ ದಿನಗಳಲ್ಲಿ ನಾಗರಿಕ ಸೇವೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣದ ತರಬೇತಿ ಕೇಂದ್ರ (ಕೋಚಿಂಗ್ ಸೆಂಟರ್ ) ತೆರೆದು ಶುಲ್ಕ ಪಾವತಿಸಿಕೊಂಡು ಬಳಿಕ ಸೀಟ್ ಇಲ್ಲವೆಂದು ವಂಚಿಸುವುದು ಮತ್ತು ಸೂಕ್ತ, ಸಮರ್ಪಕ ಅಭ್ಯಾಸ ಪರಿಕರ, ತರಗತಿ ನೀಡದೇ ವಿದ್ಯಾರ್ಥಿಗಳನ್ನು ವಂಚಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಲೇ ಇದ್ದವು.

ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರ ಸೂಚನೆಯಂತೆ ಸಚಿವಾಲಯವು, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ(NCH) ಮೂಲಕ ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ನೇರವಾಗಿ ದೂರು ಸಲ್ಲಿಸಲು ಅವಕಾಶ ಒದಗಿಸಿದೆ. ದೂರುಗಳಿಗೆ ತಕ್ಷಣವೇ ಪರಿಹಾರ ಸಹ ಕಲ್ಪಿಸಿಕೊಟ್ಟಿದೆ.

Advertisements

600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಕಲ್ಪಿಸಿದ NCH

ದೇಶದ ವಿವಿಧೆಡೆಯಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ NCH ಗೆ ದೂರು ಸಲ್ಲಿಸಿದ ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳ 600ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿದೆ. ಶಿಕ್ಷಣ ಸೇವೆಯಲ್ಲಿ ನ್ಯೂನತೆ ವೆಸಗಿದ ಕೋಚಿಂಗ್ ಸೆಂಟರ್ ಗಳಿಂದಲೇ ಒಟ್ಟು ₹1.56 ಕೋಟಿ ಪರಿಹಾರ ರೂಪದಲ್ಲಿ ಮರುಪಾವತಿ ಮಾಡಿಸಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ನಾಗರಿಕ ಸೇವೆಗಳು, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಕಾರ್ಯಕ್ರಮಗಳಿಗೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ವಿದ್ಯಾರ್ಥಿಗಳಿಗೆ, ತರಬೇತಿ ಸಂಸ್ಥೆಗಳು ನಿಯಮಾನುಸಾರ ಮರುಪಾವತಿಗೆ ನಿರಾಕರಿಸುದ್ದವು. ಹೀಗಾಗಿ ಅಭ್ಯರ್ಥಿಗಳು ಅಂತಿಮವಾಗಿ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಮೂಲಕ ನ್ಯಾಯಕ್ಕೆ ಮೊರೆ ಹೋಗಿದ್ದರು. ಗ್ರಾಹಕ ಇಲಾಖೆ ಎಲ್ಲವನ್ನೂ ಕೂಲಂಕುಷ ರೀತಿಯಲ್ಲಿ ಪರಿಶೀಲಿಸಿ ಅಗತ್ಯ ಸೇವೆ ಪೂರೈಸದ, ತರಗತಿ ವಿಳಂಬ ಮತ್ತು ರದ್ದಾದ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ತ್ವರಿತ ನ್ಯಾಯ ಕಲ್ಪಿಸುವ ಮೂಲಕ ನೆರವಾಗಿದೆ.

ಕೋಚಿಂಗ್ ಸೆಂಟರ್ ಗಳಿಗೆ ನಿರ್ದೇಶನ

ತರಬೇತಿ ಕೇಂದ್ರಗಳು ಕೇವಲ ವ್ಯಾವಹಾರಿಕ ದೃಷ್ಟಿಯಿಂದ ನೋಡದೇ, ವಿದ್ಯಾರ್ಥಿ ಕೇಂದ್ರಿತ ವಿಧಾನವನ್ನು ಅಳವಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಂದ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವಂತಹ ವಂಚನೆಗೆ ಅಂತ್ಯ ಹಾಡಬೇಕು ಎಂದು ಗ್ರಾಹಕ ವ್ಯವಹಾರಗಳ ಇಲಾಖೆ (DoCA) ನಿರ್ದೇಶಿಸಿದೆ.

ಮರುಪಾವತಿ ನಿರಾಕರಿಸಿದರೆ ಸಹಿಸಲ್ಲ

ಎಲ್ಲ ತರಬೇತಿ ಕೇಂದ್ರಗಳು ವಿದ್ಯಾರ್ಥಿ ಕೇಂದ್ರಿತ ವಿಧಾನ ಅಳವಡಿಸಿಕೊಳ್ಳುವ ಜತೆಗೆ ವಿದ್ಯಾರ್ಥಿಗಳ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಲು ಸ್ಪಷ್ಟ, ಪಾರದರ್ಶಕ ಮರುಪಾವತಿ ನೀತಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಕಾನೂನುಬದ್ಧ ಮರುಪಾವತಿ ಹಕ್ಕುಗಳನ್ನು ನಿರಾಕರಿಸುವ ಇಂಥ ವಂಚನೆಯನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಶಿಕ್ಷಣ ಸಂಸ್ಥೆಗಳು ಗ್ರಾಹಕರ ಹಕ್ಕುಗಳನ್ನು ಎತ್ತಿ ಹಿಡಿಯಬೇಕು ಎಂದೂ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ವಿವಿಧ ರಾಜ್ಯಗಳಿಂದ ಬಂದ ದೂರುಗಳೇನು?

  • ನಿರಂತರ ಅಧ್ಯಯನಕ್ಕಾಗಿ ಹಾಸ್ಟೆಲ್ ಸೌಲಭ್ಯ ಪಡೆದಿದ್ದರೂ ಸರಿಯಾದ ಸೇವೆ ನೀಡುವಲ್ಲಿ ಬಹು ನ್ಯೂನತೆಗಳಿವೆ ಎಂದು ಚೆನ್ನೈ, ತಮಿಳುನಾಡು ಭಾಗದ ವಿದ್ಯಾರ್ಥಿಗಳು NCH ಮೊರೆ ಹೋಗಿದ್ದರು.
  • ಕೆಲವೇ ಸೀಟುಗಳು ಉಳಿದಿವೆ ಎಂದು ಮನೋವಿಜ್ಞಾನ ಕಾರ್ಯಾಗಾರಕ್ಕೆ ಸೆಳೆದ ಸಂಸ್ಥೆಯೊಂದು ಪಾವತಿ ಮಾಡಿದ ನಂತರ ಸೀಟು ನಿರಾಕರಿಸಿತು ಮತ್ತು ಶುಲ್ಕ ಮರುಪಾವತಿಗೂ ನಿರಾಕರಿಸಿದೆ ಎಂದು ರಾಜ್‌ಕೋಟ್, ಗುಜರಾತ್ ಅಭ್ಯರ್ಥಿಗಳು ಆರೋಪಿಸಿದ್ದರು.
  • JEE ಕೋರ್ಸ್ ಖರೀದಿಸಿದ್ದು, ಪಾವತಿಯ ಪುರಾವೆಯನ್ನು ಒದಗಿಸಿದರೂ ಸಂಸ್ಥೆ ಖರೀದಿಯನ್ನು ನಿರಾಕರಿಸಿತ್ತು. NCH ಮಧ್ಯಸ್ಥಿಕೆಯಿಂದ ಮರುಪಾವತಿ ಸುಲಭವಾಯಿತು ಎಂದಿವೆ ಜಮ್ಶೆಡ್ಪುರ, ಜಾರ್ಖಂಡ್.

ಹೀಗೆ ದೇಶದ ವಿವಿಧೆಡೆಯ ವೆಲ್ಲೂರು, ತಮಿಳುನಾಡು, ಕೋಟಾ, ರಾಜಸ್ಥಾನ, ಕೊರ್ಬಾ, ಛತ್ತೀಸ್‌ಗಢ, ಔರಂಗಾಬಾದ್ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ಅನ್ಯಾಯಕ್ಕೆ ಒಳಗಾದವರು NCH ಮೊರೆ ಹೋಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X