ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು, ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಗಳು ಸ್ಥಳದಲ್ಲೇ ಮತೃಪಟ್ಟಿರುವ ದುರ್ಘಟನೆ ವಿಜಯಪುರದಲ್ಲಿ ನಡೆದಿದೆ.
ಹೊನಮಲ್ಲ ತೆರದಾಳ ಮತ್ತು ಗಾಯತ್ರಿ ಮೃತ ದುರ್ದೈವಿಗಳು. ಇಬ್ಬರೂ ನಗರದ ಹೊರವಲಯದಲ್ಲಿರುವ ಸೊಲ್ಲಾಪುರ ಬೈಪಾಸ್ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ.
ಇತ್ತೀಚೆಗಷ್ಟೇ ವಿವಾಹವಾಗಿದ್ದ ಇಬ್ಬರೂ ತಮ್ಮ ಸಂಬಂಧಿಕರ ಊರಿಗೆ ಹೋಗಿ, ವಾಪಸ್ ಬರುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಹೊನಮಲ್ಲ ತೆರದಾಳ ಅವರು ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ವಿಜಯಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆನಪಿಡಿ: ಅವಸರವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತದೆ. ವೇಗದ ಚಾಲನೆ, ಅಡ್ಡಾದಿಡ್ಡಿ ಚಾಲನೆ, ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದರಿಂದ ಅಪಘಾತಗಳು ಸಂಭವಿಸುತ್ತವೆ. ವೇಗವಾಗಿ ಚಾಲನೆ ಮಾಡುವ ಬದಲು 5-10 ನಿಮಿಷ ಮೊದಲೇ ಮನೆಯಿಂದ ಹೊರಡಿ, ನಿಧಾನವಾಗಿ ಚಲಿಸಿ... ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ...